ETV Bharat / state

ಪತ್ನಿ ಹೆಸರಿನ ಸಮುದಾಯ ಭವನ ನಿರ್ಮಾಣಕ್ಕೆ ಬಿಎಸ್​ವೈ ನಾಳೆ ಶಂಕುಸ್ಥಾಪನೆ

ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ನಾಳೆ ಆಗಮಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪತ್ನಿಯ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಶ್ರೀಮತಿ ಮೈತ್ರಾದೇವಿ ಶ್ರೀ ಬಿ.ಎಸ್. ಯಡಿಯೂರಪ್ಪ’ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿ.ಎಸ್. ಯಡಿಯೂರಪ್ಪ
author img

By

Published : Oct 17, 2019, 9:16 PM IST

ತುಮಕೂರು: ಅಕ್ಟೋಬರ್ 18ರಂದು ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪತ್ನಿ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಶ್ರೀಮತಿ ಮೈತ್ರಾದೇವಿ ಶ್ರೀ ಬಿಎಸ್. ಯಡಿಯೂರಪ್ಪ’ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳ ಜೊತೆ ಜೊತೆಗೆ ತಮ್ಮ ಪತ್ನಿ ಮೈತ್ರಾದೇವಿ ಹೆಸರಿನಲ್ಲಿಯೂ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸರ್ಕಾರಿ ಕಾರ್ಯಕ್ರಮವಾಗಿ ಐತಿಹಾಸಿಕ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಿಎಸ್ ವೈ ಯಿಂದ ಪತ್ನಿ ಹೆಸರಿನ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
10ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳಾದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ದೇವಾಲಯದ ನವೀಕರಣ ಕಾಮಗಾರಿಯ ಎರಡನೇ ಹಂತದ ದೇವಾಲಯದ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ(ರುದ್ರಾಭಿಷೇಕ ಮಂಟಪ), ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಪವಾಡ ದೃಶ್ಯಗಳನ್ನು ಒಳಗೊಂಡಿರುವ ಪ್ರದಕ್ಷಿಣಾ ಪ್ರಾಂಗಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸುವರು. ಇದೇ ವೇಳೆ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿರುವ 5 ಕೋಟಿ ರೂ. ವೆಚ್ಚದಲ್ಲಿನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Intro:Body:ಮುಖ್ಯಮಂತ್ರಿ ಬಿಎಸ್ ವೈ ಯಿಂದ ತಮ್ಮ ಪತ್ನಿ ಹೆಸರಿನ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ……

ತುಮಕೂರು
ಅಕ್ಟೋಬರ್ 18ರಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪತ್ನಿಯ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಶ್ರೀಮತಿ ಮೈತ್ರಾದೇವಿ ಶ್ರೀ ಬಿ.ಎಸ್. ಯಡಿಯೂರಪ್ಪ’ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸರಕಾರಿ ಕಾಯಱಕ್ರಮಗಳ ಜೊತೆ ಜೊತೆಗೆ ತಮ್ಮ ಪತ್ನಿ ಮೈತ್ರಾದೇವಿ ಹೆಸರಿನಲ್ಲಿಯೂ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸರ್ಕಾರಿ ಕಾರ್ಯಕ್ರಮವಾಗಿ ಐತಿಹಾಸಿಕ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ ದಲ್ಲಿ ಭಾಗವಹಿಸುವರು.

ಧಾರ್ಮಿಕ ದತ್ತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

10 ಕೋಟಿ ವೆಚ್ಚದಲ್ಲಿ ಪೂಣಱಗೊಂಡಿರುವ ಕಾಮಗಾರಿಗಳಾದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ದೇವಾಲಯದ ನವೀಕರಣ ಕಾಮಗಾರಿಯ ಎರಡನೇ ಹಂತದ ಕಾಮಗಾರಿಗಳಲ್ಲಿನ ದೇವಾಲಯದ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ(ರುದ್ರಾಭಿಷೇಕ ಮಂಟಪ), ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಪವಾಡ ದೃಶ್ಯಗಳನ್ನು ಒಳಗೊಂಡಿರುವ ಪ್ರದಕ್ಷಿಣಾ ಪ್ರಾಂಗಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸುವರು.

ಇದೇ ವೇಳೆ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿರುವ 5 ಕೋಟಿ ರೂ. ವೆಚ್ಚದಲ್ಲಿನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸುವರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.