ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ - ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಪ್ರತಿಭಟನೆ
author img

By

Published : Jul 30, 2019, 2:28 PM IST

ತುಮಕೂರು: ಸಾರ್ವಜನಿಕ ವಲಯದ ರೈಲು, ವಿಶ್ವೇಶ್ವರಯ್ಯ ಸ್ಥಾಪಿಸಿದ ಭದ್ರಾವತಿ ಉಕ್ಕಿನ ಕಾರ್ಖಾನೆ ಖಾಸಗೀಕರಣ ಮಾಡುತ್ತಿರುವುದು, ಕಾರ್ಮಿಕ ವಿರೋಧಿ ನೀತಿ, ಕನಿಷ್ಠ ಕೂಲಿ 24,000 ರೂ. ನಿಗದಿ, ಗುತ್ತಿಗೆ ಕಾರ್ಮಿಕರು, ಸ್ಕೀಮ್ ನೌಕರರ ಕಾಯಂಮಾತಿ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆ ಕುರಿತು ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಕೇಂದ್ರ ಸರ್ಕಾರ ಆತುರದಲ್ಲಿ ಕಾರ್ಮಿಕರ ಕಾನೂನುಗಳನ್ನು ಬದಲಾವಣೆ ಮಾಡುತ್ತಿರುವುದು ನ್ಯಾಯಸಮ್ಮತವಾದ ಕ್ರಮವಲ್ಲ. ಸಂಸತ್ತಿನಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗದೆ ಏಕಪಕ್ಷೀಯವಾಗಿ ರೂಪುಗೊಳಿಸುವ ಮೂಲಕ ಕಾರ್ಖಾನೆಗಳ ಮಾಲೀಕರಿಗೆ ಅನುಕೂಲವಾಗುವಂತೆ ಮಾಡಲಾಗುತ್ತದೆ. ಜೊತೆಗೆ ಸಾರ್ವಜನಿಕರ ವಲಯದಲ್ಲಿ ಕೈಗಾರಿಕೆಗಳನ್ನು ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಗುತ್ತಿಗೆ ನೌಕರರು, ಸ್ಕೀಮ್ ನೌಕರರಾದ ಬಿಸಿಯೂಟದವರು, ಆಶಾ, ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು. ಅಲ್ಲದೆ ಕಡ್ಡಾಯವಾಗಿ ನಿವೃತ್ತಿಯ ನಂತರ ಪ್ರತಿ ತಿಂಗಳು 6,000 ರೂ. ಪಿಂಚಣಿ ದೊರೆಯುವಂತಹ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

Intro:ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸಿಐಟಿಯು ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Body:ಸಾರ್ವಜನಿಕ ವಲಯದ ರೈಲು, ವಿಶ್ವೇಶ್ವರಯ್ಯ ಸ್ಥಾಪಿಸಿದ ಭದ್ರಾವತಿ ಉಕ್ಕಿನ ಕಾರ್ಖಾನೆ ಖಾಸಗೀಕರಣ ಮಾಡುತ್ತಿರುವುದು, ಕಾರ್ಮಿಕ ವಿರೋಧಿ ನೀತಿ, ಕನಿಷ್ಠ ಕೂಲಿ ರೂ 24,000 ನಿಗದಿ, ಗುತ್ತಿಗೆ ಕಾರ್ಮಿಕರು, ಸ್ಕೀಮ್ ನೌಕರರ ಕಾಯಮಾತಿಗೆ ಆಗ್ರಹದ ವಿಚಾರಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಕೇಂದ್ರ ಸರ್ಕಾರ ಆತುರದಲ್ಲಿ ಕಾರ್ಮಿಕರ ಕಾನೂನುಗಳನ್ನು ಕಾರ್ಮಿಕರ ಸಂಹಿತೆಯಾಗಿ ಬದಲಾವಣೆ ಮಾಡುತ್ತಿರುವುದು ನ್ಯಾಯಸಮ್ಮತವಾದ ಕ್ರಮವಲ್ಲ. ಸಂಸತ್ತಿನಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗದೆ, ಏಕಪಕ್ಷೀಯವಾಗಿ ರೂಪುಗೊಳಿಸುವ ಮೂಲಕ ಕಾರ್ಖಾನೆಗಳ ಮಾಲೀಕರಿಗೆ ಅನುಕೂಲವಾಗುವಂತೆ ಮಾಡಲಾಗುತ್ತದೆ. ಜೊತೆಗೆ ಸಾರ್ವಜನಿಕರ ವಲಯದಲ್ಲಿ ಕೈಗಾರಿಕೆಗಳನ್ನು ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗುತ್ತಿಗೆ ನೌಕರರು, ಸ್ಕೀಮ್ ನೌಕರರಾದ ಬಿಸಿಯೂಟ, ಆಶಾ, ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು ಅಲ್ಲದೆ ಕಡ್ಡಾಯವಾಗಿ ನಿವೃತ್ತಿಯ ನಂತರ ಪ್ರತಿ ತಿಂಗಳು ರೂ 6,000 ಪಿಂಚಣಿ ದೊರೆಯುವಂತಹ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಬೈಟ್: ಸೈಯದ್ ಮುಜೀಬ್, ಸಿಐಟಿಯುನ ಜಿಲ್ಲಾಧ್ಯಕ್ಷ

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.