ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಬೈಕ್ ಱಲಿ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರೈತ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ್ದ ರೈತ ಸಂಘ ಸದಸ್ಯರು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.
ಸುಮಾರು ಹತ್ತು ಗಂಟೆ ವೇಳೆಗೆ ಬೈಕ್ ಱಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.