ETV Bharat / state

ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರಿಂದಲೇ ಸ್ವಚ್ಛತಾ ಕಾರ್ಯ - ನ್ಯಾಯಾಧೀಶರಿಂದ ಸ್ವಚ್ಛತಾ ಕಾರ್ಯ

ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಮ್ಮ ನ್ಯಾಯಾಲಯ ಸ್ವಚ್ಛ ನ್ಯಾಯಾಲಯ ಎಂಬ ಅಭಿಯಾನದಡಿ ನ್ಯಾಯಾಧೀಶರು ಹಾಗೂ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯ ನಡೆಸಿದರು.

Cleanup work by a judge
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಿಂದಲೇ ಸ್ವಚ್ಛತಾ ಕಾರ್ಯ
author img

By

Published : Jan 30, 2020, 1:23 PM IST

ತುಮಕೂರು: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಮ್ಮ ನ್ಯಾಯಾಲಯ ಸ್ವಚ್ಛ ನ್ಯಾಯಾಲಯ ಎಂಬ ಅಭಿಯಾನದಡಿ ನ್ಯಾಯಾಧೀಶರು ಹಾಗೂ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯ ನಡೆಸಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸಂಜೀವ ಕುಮಾರ್
ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸಂಜೀವ ಕುಮಾರ್, ನಮ್ಮ ನ್ಯಾಯಾಲಯ ಸ್ವಚ್ಛ ನ್ಯಾಯಾಲಯ ಎಂಬ ಅಭಿಯಾನದಡಿ ಕಳೆದ ಮೂರು ತಿಂಗಳಿನಿಂದ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ಕೇವಲ ನಮ್ಮ ಮನೆಗಳನ್ನು ಮಾತ್ರ ಸ್ವಚ್ಛಗೊಳಿಸಿದರೆ ಸಾಲದು. ನಾವು ಕರ್ತವ್ಯ ನಿರ್ವಹಿಸುವ ಸ್ಥಳ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆ ಮೂಲಕ ಪ್ರತಿಯೊಬ್ಬರೂ ಸಹ ತಾವು ಕರ್ತವ್ಯ ನಿರ್ವಹಿಸುವ ಸ್ಥಳದ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ತುಮಕೂರು ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕಾರ್ಯ ಮಾಡಬೇಕಿದೆ. ಆ ಮೂಲಕ ತುಮಕೂರು ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ ಮಾಡಿ ರಾಷ್ಟ್ರಮಟ್ಟದಲ್ಲಿ ಕೊಂಡೊಯ್ಯಬಹುದು ಎಂದರು. ಅಲ್ಲದೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವಚ್ಛ ಭಾರತ ಅಭಿಯಾನದಲ್ಲಿ ಪ್ರತಿಯೊಬ್ಬ ಪ್ರಜೆಯೂ ಪಾಲ್ಗೊಳ್ಳಬೇಕಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.