ETV Bharat / state

ಫುಟ್​ಪಾತ್​​ ಅಂಗಡಿಗಳ ತೆರವು: ಸೂಕ್ತ ಸ್ಥಳ ಕಲ್ಪಿಸುವಂತೆ ವ್ಯಾಪಾರಿಗಳಿಂದ ಮನವಿ

ಫುಟ್​ಪಾತ್ ಮೇಲೆ ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವವರ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದರಿಂದ ಅಲ್ಲಿನ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಗಿದೆ.

author img

By

Published : Sep 16, 2019, 9:37 PM IST

ಮನವಿ

ತುಮಕೂರು: ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಿಗೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ವ್ಯಾಪಾರಸ್ಥರು

ಪ್ರಶಾಂತ್​ ಥಿಯೇಟರ್ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದುಹೋಗುವ ರಸ್ತೆಯಲ್ಲಿ ಕಳೆದ 15 ವರ್ಷಗಳಿಂದ ಫುಟ್​ಪಾತ್​ ಮೇಲೆ ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದರಿಂದ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಈ ವೇಳೆ ಮಾತನಾಡಿದ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಖುದ್ದುಸ್ ಅಹಮದ್, ಗುಬ್ಬಿ ವೀರಣ್ಣ ರಂಗಮಂದಿರದ ಬಳಿ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಮಳಿಗೆಗಳನ್ನು ತೆರವು ಗೊಳಿಸುವುದರ ಮೂಲಕ ನಮ್ಮನ್ನು ಬೀದಿಗೆ ತಳ್ಳುತ್ತಿದ್ದಾರೆ ಎಂದರು.

Intro:ತುಮಕೂರು: ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಿಗೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಯಿತು.

Body:ಪ್ರಶಾಂತ ಥಿಯೇಟರ್ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದುಹೋಗುವ ರಸ್ತೆಯಲ್ಲಿ ಕಳೆದ ಹದಿನೈದು ವರ್ಷಗಳಿಂದ ಫುಟ್ಪಾತ್ ಮೇಲೆ ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದರಿಂದ ಅಲ್ಲಿನ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಖುದ್ದುಸ್ ಅಹಮದ್, ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬಳಿ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ, ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಮಳಿಗೆಗಳನ್ನು ತೆರವು ಗೊಳಿಸುವುದರ ಮೂಲಕ ನಮ್ಮನ್ನು ಬೀದಿಗೆ ತಳ್ಳುತ್ತಿದ್ದಾರೆ, ಈಗಾಗಲೇ ಶಾಸಕರಾದ ಜ್ಯೋತಿಗಣೇಶ್, ಸಂಸದರಾದ ಜಿ. ಎಸ್ ಬಸವರಾಜು ಅವರ ಗಮನಕ್ಕೆ ತಂದಿದ್ದೆವು. ಆಗ ಆ ಸ್ಥಳಕ್ಕೆ ಪರ್ಯಾಯವಾಗಿ ಸೂಕ್ತ ಸ್ಥಳ ನಿಗದಿ ಮಾಡಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದರು, ಆದರೆ ಈಗ ಯಾರು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ವ್ಯಾಪಾರ ಮಾಡಲು ಸೂಕ್ತ ಸ್ಥಳವಕಾಶ ನೀಡದಿದ್ದರೆ ವಿಷ ಕುಡಿಯಲು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಬೈಟ್: ಖುದ್ದುಸ್ ಅಹಮದ್, ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.