ತುಮಕೂರು : ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೆ.25ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿನ ಮೊದಲ ಅಂತಸ್ತಿನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ನಾಳೆ ಸಿಎಂ ಬರುತ್ತಿರುವ ಹಿನ್ನೆಲೆ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಸಿಎಂ, ಇಡೀ ಸರ್ಕಾರ ಆರ್‌ಎಸ್‌ಎಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ