ETV Bharat / state

ತುಮಕೂರಿಗೆ ನಾಳೆ ಸಿಎಂ ಭೇಟಿ: ಕೋವಿಡ್ ನಿಯಂತ್ರಣ ಕುರಿತು ಜಿಲ್ಲಾಡಳಿತದೊಂದಿಗೆ ಸಭೆ

ನಾಳೆ ತುಮಕೂರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾಡಳಿತದೊಂದಿಗೆ ಕೋವಿಡ್ ಪರಿಶೀಲನಾ ಸಭೆ ನಡೆಸಲಿದ್ದಾರೆ.

cm to visit  tumkur tomorrow
cm to visit tumkur tomorrow
author img

By

Published : May 27, 2021, 6:40 PM IST

ಬೆಂಗಳೂರು: ನಿವಾಸ, ಕಚೇರಿ, ವಿಧಾನಸೌಧದಿಂದ ಕೋವಿಡ್ ನಿಯಂತ್ರಣ ಕುರಿತು ಪರಿಶಿಲನೆ ನಡೆಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಜಿಲ್ಲೆಗಳತ್ತ ಮುಖ ಮಾಡಲು ನಿರ್ಧರಿಸಿದ್ದಾರೆ. ಆರಂಭಿಕ ಹಂತವಾಗಿ ನಾಳೆ ತುಮಕೂರಿಗೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಸರ್ಕಾರಿ ನಿವಾಸ ಕಾವೇರಿಯಿಂದ ರಸ್ತೆ ಮಾರ್ಗವಾಗಿ ತುಮಕೂರಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಯಡಿಯೂರಪ್ಪ, 11 ಗಂಟೆಗೆ ಜಿಲ್ಲಾಡಳಿತದೊಂದಿಗೆ ಕೋವಿಡ್ ಪರಿಶೀಲನಾ ಸಭೆ ನಡೆಸಲಿದ್ದಾರೆ.

cm to visit  tumkur tomorrow
ನಾಳೆ ತುಮಕೂರಿಗೆ ಭೇಟಿ ನೀಡಲಿರುವ ಮುಖ್ಯಂತ್ರಿ

ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳು, ಸೋಂಕಿನ ಪ್ರಮಾಣ, ಆಸ್ಪತ್ರೆಗಳಲ್ಲಿನ ವ್ಯವಸ್ಥೆ, ಬೆಡ್, ಐಸಿಯು, ವೆಂಟಿಲೇಟರ್, ಆಕ್ಸಿಜನ್ ಲಭ್ಯತೆ, ಔಷಧ ಸಮಸ್ಯೆ ಕುರಿತು ಚರ್ಚೆ ನಡೆಸಲಿದ್ದಾರೆ. ಚಿಕಿತ್ಸೆಗೆ ಇರುವ ಸಮಸ್ಯೆ, ಕೊರತೆಗಳ ಬಗ್ಗೆಯೂ ಮಾಹಿತಿ ಪಡೆಯಲಿದ್ದು, ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

ಮಧ್ಯಾಹ್ನ 12.15ಕ್ಕೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಸಿಎಂ, ಮಠದಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ತೆರಳಿ ವೀಕ್ಷಣೆ ಮಾಡಲಿದ್ದು, ನಂತರ 1.30ಕ್ಕೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಅಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.