ತುಮಕೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಜಿ. ಪರಮೇಶ್ವರ್ ಅವರಿಗೆ ಎರಡು ಕುರಿ ಮರಿಗಳನ್ನು ಉಡುಗೊರೆಯಾಗಿ ನೀಡಿ ಶುಭ ಕೋರಿದರು.
ಎರಡು ಕುರಿಮರಿಗಳನ್ನು ಸಂತಸದಿಂದಲೇ ಸ್ವೀಕರಿಸಿದ ಪರಮೇಶ್ವರ್, ಮರಿಗಳಿಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು. ಈ ಹಿಂದೆ ಅಭಿಮಾನಿಯೊಬ್ಬರು ಪರಮೇಶ್ವರ್ಗೆ ಹಬ್ಬದ ವೇಳೆ ಕುರಿಮರಿ ನೀಡಿ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : ಸೆ.13ರಂದು ಬಿಜೆಪಿ ಶಾಸಕಾಂಗ ಸಭೆ: ಅಧಿವೇಶನದಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಚರ್ಚೆ