ETV Bharat / state

ಶಿರಾ ಉಪಕದನ:ಪಟ್ಟನಾಯಕನಹಳ್ಳಿ ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ಭೇಟಿ - ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶಿರಾದಲ್ಲಿ ಮತಯಾಚನೆ

ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿದ್ದು, ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.

matt
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಭೇಟಿ
author img

By

Published : Oct 17, 2020, 3:49 PM IST

ತುಮಕೂರು: ಶಿರಾ ಉಪ ಚುನಾವಣೆಗೆ ಅಭ್ಯರ್ಥಿಗಳ ಮತ ಬೇಟೆ ನಡೆದಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಕ್ಷೇತ್ರಕ್ಕೆ ಭೇಟಿ ನೀಡಿದ್ರು.

matt
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಭೇಟಿ

ಶಿರಾ ತಾಲೂಕಿನ ಪ್ರಮುಖ ಧಾರ್ಮಿಕ ಕೇಂದ್ರ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿದ ಟಿ.ಬಿ.ಜಯಚಂದ್ರ, ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದ್ದು , ಶ್ರೀಮಠ ಕುಂಚಿಟಿಗ ಒಕ್ಕಲಿಗ ಸಮುದಾಯದ ಪ್ರಮುಖ ಮಠವಾಗಿರುವುದರಿಂದ, ನಾಮಪತ್ರ ಸಲ್ಲಿಕೆ ನಂತರ ಟಿ.ಬಿ.ಜಯಚಂದ್ರ ಭೇಟಿ ನೀಡಿ ಕುಂಚಿಟಿಗರ ಮತಗಳ ಮೇಲೆ ಕಣ್ಣು ಇರಿಸಿದ್ದಾರೆ.

ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಅರ್.ಮಂಜುನಾಥ್, ಕುಂಚಿಟಿಗ ಸಂಘದ ಅಧ್ಯಕ್ಷ ಪಿ.ಎಸ್.ತ್ಯಾಗರಾಜ್, ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.