ETV Bharat / state

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯುವಂತೆ ದೇವೇಗೌಡರಿಗೆ ಕಾಂಗ್ರೆಸ್ ಒತ್ತಾಯ! - ದೇವೇಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕೆಲ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಆದರೆ , ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರು ಮನವಿ ಮಾಡಿರುವುದಾಗಿ ರಮೇಶ್ ಬಾಬು ಹೇಳಿದರು.

ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು
author img

By

Published : Mar 21, 2019, 3:54 AM IST

ತುಮಕೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕೆಲ ಕಾಂಗ್ರೆಸ್ ಮುಖಂಡರು ಮಾಜಿ ಪ್ರಧಾನಿ ದೇವೇಗೌಡರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರು ಬಂದು ಸ್ಪರ್ಧಿಸಲಿ ಎಂದು ಸಚಿವ ಹೆಚ್ ಡಿ ರೇವಣ್ಣ ಕೂಡ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಗಿಮಿಕ್ ಮಾಡುತ್ತಿಲ್ಲ ಎಂದು ತಿಳಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು

ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ, ಬದಲಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ದೇವೇಗೌಡರು ತಿಳಿಸಿದ್ರು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರುಗಳು ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ದೇವೇಗೌಡರಿಗೆ ಮನವಿ ಮಾಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕೆಲ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು. ಆದರೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರು ಮನವಿ ಮಾಡಿರುವುದಾಗಿ ಹೇಳಿದರು.

ಜಿಲ್ಲೆಯ ಪ್ರಜ್ಞಾವಂತ ಮತದಾರರ ಪರವಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೇವೆ ಎಂದರು.

ಜಿಲ್ಲೆಯ ಶಾಸಕರಾದ ಗೌರಿಶಂಕರ್, ಎಸ್ ಆರ್ ಶ್ರೀನಿವಾಸ್, ಸತ್ಯನಾರಾಯಣ ಸೇರಿದಂತೆ ಮಾಜಿ ಶಾಸಕರು ಸಹ ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಮತ್ತು ಕಾಂಗ್ರೆಸ್​ನ ಮಾಜಿ ಶಾಸಕರಾದ ರಫೀಕ್ ಅಹಮದ್ ಸೇರಿದಂತೆ ಅನೇಕ ಸ್ಥಳೀಯ ಕಾಂಗ್ರೆಸ್ ಮುಖಂಡರು, ದೇವೇಗೌಡರು ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿ ಎಂದು ಸಹಮತ ವ್ಯಕ್ತಪಡಿಸಿದ್ದಾರೆ.

ಆಕಸ್ಮಾತ್ ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ರೆ, ಅವರು ಯಾರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಅವರನ್ನು ಗೆಲ್ಲಿಸಿಕೊಂಡು ಬರಲಿದ್ದೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿಳಿಸಿರುವುದಾಗಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.