ತುಮಕೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಸಚಿವರಿಂದ ಮೊದಲು ರಾಜೀನಾಮೆ ಪಡೆದುಕೊಂಡು ಪ್ರಾಥಮಿಕ ತನಿಖೆ ನಡೆಸಲಿ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸರ್ಕಾರಕ್ಕೆ ಆಗ್ರಹಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರನ ಆತ್ಮಹತ್ಯೆ ಸಾರ್ವಜನಿಕ ಜೀವನದಲ್ಲಿ ಇರುವವರ ತಲೆತಗ್ಗಿಸುವ ವಿಚಾರವಾಗಿದೆ.
ಸಚಿವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಅಂದರೆ ಅದು ನಾವು ತಲೆ ತಗ್ಗಿಸುವ ವಿಚಾರ. ಇದರಲ್ಲಿ ಸಚಿವ ಕೆ.ಎಸ್.ಈಶ್ವರಪ್ಪನವರ ಹೆಸರು ಇರೋದರಿಂದ ನಂಬಲೇಬೇಕು. ಈಶ್ವರಪ್ಪ ರಾಜೀನಾಮೆ ಕೊಡಬೇಕು ಮತ್ತು ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕೆಂದು ಒತ್ತಾಯಿಸಿದರು. ಆತ್ಮಹತ್ಯೆ ನೋಟ್‌ನಲ್ಲಿ ಹೆಸರಿದೆ ಅಂದಾಕ್ಷಣ ಅರೆಸ್ಟ್ ಮಾಡಬೇಕಂತಿಲ್ಲ.
ಆದರೆ, ಈ ಪ್ರಕರಣದಲ್ಲಿ ಈಶ್ವರಪ್ಪನವರು ಎಷ್ಟರ ಮಟ್ಟಿಗೆ ಭಾಗಿಯಾಗಿದ್ದಾರೆ ಅನ್ನುವುದರ ಮೂಲಕ ಕಾನೂನಿನ ಚೌಕಟ್ಟಿನಲ್ಲಿ ಅರೆಸ್ಟ್ ಮಾಡಬೇಕು. ನನ್ನ ಕ್ಷೇತ್ರದಲ್ಲಿ ಶೇ.40ರಷ್ಟು ಕಮಿಷನ್ ವಿಚಾರ ನೇರವಾಗಿ ನನ್ನ ಗಮನಕ್ಕೆ ಬಂದಿಲ್ಲ. ಗುತ್ತಿಗೆದಾರರು ಮಾತಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ನೂರಕ್ಕೆ ನೂರರಷ್ಟು ನಾನು ರಾಜೀನಾಮೆ ಕೊಡುವುದಿಲ್ಲ; ಸಚಿವ ಈಶ್ವರಪ್ಪ