ತುಮಕೂರು: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯೇ ಒಳ ಸಂಚಿನ ಪ್ರಿನ್ಸಿಪಾಲ್ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಇಲ್ಲಿ ಮಾಧ್ಯಮಗೋಷ್ಟಿ ಕರೆದಿಲ್ಲ. ಬದಲಾಗಿ ಎಲ್ಲಾ ಕಾಲದಲ್ಲೂ ಪಾರ್ಟಿಯಲ್ಲಿ ವಿರೋಧಗಳು ಇರುತ್ತವೆ. ಈ ಕಾರಣಕ್ಕೆ ಸಿದ್ದರಾಮಯ್ಯನವರು ಆ ರೀತಿ ಹೇಳಿದ್ದಾರೆ. ಅವರು ಅವರ ಕ್ಷೇತ್ರಕ್ಕೆ ಸೀಮಿತವಾಗಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯರ ಹೇಳಿಕೆಯನ್ನ ಸಮರ್ಥಿಸಿಕೊಂಡರು.
ಓದಿ: ದೇವೇಗೌಡರ ಇತಿಹಾಸದ ಬಗ್ಗೆ ನಿನಗೇನಪ್ಪ ಗೊತ್ತು?: ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಬೇರೆ ಜಿಲ್ಲೆಯ ಮುಖಂಡರಿಗೆ, ಕಾರ್ಯಕರ್ತರಿಗೆ ಸಿದ್ದರಾಮಯ್ಯನವರ ಹೇಳಿಕೆ ಅನ್ವಯವಾಗುವುದಿಲ್ಲ. ಇದನ್ನು ಸಿದ್ದರಾಮಯ್ಯ ಕೂಡ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಆಸ್ತಿ. ಮುಂದಿನ ದಿನದಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂದು ರಾಜಣ್ಣ ಹೇಳಿದರು.
ಓದಿ: ಜೆಡಿಎಸ್-ಬಿಜೆಪಿ 29 ಕಡೆ ಒಳ ಒಪ್ಪಂದ ಮಾಡಿಕೊಂಡಿದ್ದು ನಿಜ: ಹೆಚ್‌ಡಿಕೆಗೆ ಮತ್ತೆ ತಿವಿದ ಸಿದ್ದರಾಮಯ್ಯ
ಬಹಳಷ್ಟು ಜನರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಕೆಲವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ರಾಜಣ್ಣ ತಿಳಿಸಿದರು.