ತುಮಕೂರು: ಕೊರಟಗೆರೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಕ್ಯಾಶವಾರದ ನಾಗರಾಜು (68) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಶಾಸಕ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ – ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಘಟಕಗಳ ಅಧ್ಯಕ್ಷರು, ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಕ್ಯಾಶವಾರದ ನಾಗರಾಜು ಅವರು ಕೂಡ ಭಾಗಿಯಾಗಿ ಸಭೆಯಲ್ಲಿ ಭಾಷಣ ಮಾಡಿದ್ದರು. ಇದಾದ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣಕ್ಕೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತರುವ ವ್ಯವಸ್ಥೆ ಮಾಡಲಾಯಿತು. ಆದರೆ, ಅವರು ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.
ಸದಸ್ಯರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಶಾಸಕ ಡಾ. ಜಿ ಪರಮೇಶ್ವರ್ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನಾಗರಾಜ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಮೃತರ ಅಂತ್ಯಕ್ರಿಯೆ ಇಂದು ಕ್ಯಾಶವಾರದಲ್ಲಿ ನೆರವೇರಲಿದೆ.
ಇದನ್ನೂ ಓದಿ: ಚುನಾವಣೆಗೆ ಸಿದ್ಧತೆ: ಶಿಡ್ಲಘಟ್ಟ ಕ್ಷೇತ್ರದಲ್ಲಿ ಪೈಪೋಟಿ ಮಧ್ಯೆ ಮಗನನ್ನು ಅಖಾಡಕ್ಕಿಳಿಸಲು ಸಜ್ಜಾದ ಶಾಸಕ