ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ತುಮಕೂರಿನ ಮೆಡಿಕಲ್ ಕಾಲೇಜಿನಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಐಟಿ ಅಧಿಕಾರಿಗಳ ಕಿರುಕುಳದಿಂದಲೇ ರಮೇಶ್ ಸಾವನ್ನಪ್ಪಿದ್ದು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಸ್ಥಳದಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ ಸೇರಿ ಸಬ್ ಇನ್ಸ್ಪೆಸ್ಪೆಕ್ಟರ್ಗಳು ಮೊಕ್ಕಾಂ ಹೂಡಿದ್ದಾರೆ.