ತುಮಕೂರು: ಕೋವಿಡ್ 3ನೇ ಅಲೆ ಹಿನ್ನೆಲೆಯಲ್ಲಿ ದಾಸೋಹ ದಿನದ ಅದ್ದೂರಿ ಕಾರ್ಯಕ್ರಮ ರದ್ದು ಮಾಡಲಾಗುತ್ತಿದೆ ಎಂದು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಠದಲ್ಲಿ ಸರಳ ಪೂಜೆ, ಉತ್ಸವ ಮಾಡಲು ನಿರ್ಧರಿಸಲಾಗಿದೆ ಎಂದರು.
ಜನವರಿ 21ರಂದು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನ ನಡೆಯಬೇಕಿತ್ತು. ಸರ್ಕಾರದಿಂದಲೇ ದಾಸೋಹ ದಿನದ ಕಾರ್ಯಕ್ರಮ ನಡೆಯಬೇಕಿತ್ತು. ಕೋವಿಡ್ ಕಾರಣಕ್ಕೆ ಮಠದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮ ಇಲ್ಲ ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ.