ತುಮಕೂರು: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಇದುವರೆಗೂ ಅತಿ ಜಾಗರೂಕತೆಯಿಂದ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಕುಣಿಗಲ್ ತಾಲೂಕಿನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ.
ಇವರು ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದರು. ಸೋಂಕಿತ ಹೆಡ್ ಕಾನ್ಸ್ಟೇಬಲ್ಗೆ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಇವರ ಸಂಪರ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಹೆಡ್ ಕಾನ್ಸ್ಟೇಬಲ್ ಅವರ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಲಾಗುತ್ತಿದೆ.