ETV Bharat / state

ತುಮಕೂರು ವಿಶ್ವವಿದ್ಯಾಲಯದ ಸಿಬ್ಬಂದಿಗೆ ಕೊರೊನಾ - ತುಮಕೂರು ವಿವಿಯ ಬೋಧಕರಿಗೆ ಕೊರೊನಾ ಸೋಂಕು

ಕಲ್ಪತರು ನಾಡು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವಿವಿಯ ಉಪಕುಲಪತಿ ಸಿದ್ದೇಗೌಡ ತಿಳಿಸಿದರು.

Tumkur university
ತುಮಕೂರು ವಿಶ್ವವಿದ್ಯಾಲಯ
author img

By

Published : Nov 23, 2020, 3:04 PM IST

ತುಮಕೂರು: ಇಲ್ಲಿನ ತುಮಕೂರು ವಿಶ್ವವಿದ್ಯಾಲಯದಲ್ಲಿ ಈವರೆಗೂ 373 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಓರ್ವರಿಗೆ ಸೋಂಕು ತಗುಲಿದೆ ಎಂದು ಉಪಕುಲಪತಿ ಸಿದ್ದೇಗೌಡ ಮಾಹಿತಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಲಭ್ಯವಿಲ್ಲ. ವಿದ್ಯಾರ್ಥಿಗಳು ಸ್ಥಳೀಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಿದ್ದಾರೆ. ಇನ್ನೂ ವರದಿ ಬರಬೇಕಿದೆ ಎಂದು ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯ ಉಪಕುಲಪತಿ ಸಿದ್ದೇಗೌಡ

ನೆಗೆಟಿವ್ ಇರುವಂತಹ ವಿದ್ಯಾರ್ಥಿಗಳು ಮಾತ್ರ ಕಾಲೇಜುಗಳಿಗೆ ಹಾಜರಾಗುತ್ತಿದ್ದಾರೆ. ಶೇ. 15ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಆನ್​​​ಲೈನ್​​​ನಲ್ಲಿ ಪಾಠ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.