ತುಮಕೂರು : ಇಂದು ಕೊರೊನಾ ಸೋಂಕಿನಿಂದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಏಳು ಮಂದಿ ಸೋಂಕಿನಿಂದ ಗುಣಮುಖರಾದಂತಾಗಿದೆ.
ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಿ.1688 ಬಿಡುಗಡೆಗೊಂಡಿದ್ದು, 22 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ 31 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ 2135 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. 50 ಮಂದಿ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 9740 ಮಂದಿ ಪರೀಕ್ಷೆಯಲ್ಲಿ 8953 ಮಂದಿಯಲ್ಲಿ ನೆಗೆಟಿವ್ ಕಂಡು ಬಂದಿದೆ. 649 ಮಂದಿಯ ಸ್ಯಾಂಪಲ್ ವರದಿ ಇನ್ನೂ ಬರಬೇಕಿದೆ. 107 ಜನರ ಸ್ಯಾಂಪಲ್ ವರದಿ ತಿರಸ್ಕರಿಸಿ ಮರಳಿ ಪರೀಕ್ಷೆಗೆ ಕಳುಹಿಸಲಾಗಿದೆ.
ಈವರೆಗೂ ಜಿಲ್ಲೆಯಲ್ಲಿ 31 ಮಂದಿಯಲ್ಲಿ ಕೋವಿಡ್-19 ಸೋಂಕು ಕಂಡು ಬಂದಿದೆ. ಇಬ್ಬರು ಮೃತಪಟ್ಟಿದ್ರೆ, 13 ವರ್ಷದ ಬಾಲಕ ಸೇರಿ 7 ಮಂದಿ ಗುಣಮುಖರಾಗಿದ್ದಾರೆ.