ತುಮಕೂರು: ಶಿರಸ್ತೇದಾರರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲಾಧಿಕಾರಿ ಕಚೇರಿ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.
ಅಧಿಕಾರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಡಿಸಿ ಕಚೇರಿಯ ಒಂದು ಭಾಗವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಕಚೇರಿಯ ಅಕ್ಕಪಕ್ಕದ ಇಲಾಖೆಗಳ ಕಚೇರಿಯ ಎಲ್ಲಾ ವಿಭಾಗವನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದ್ದು, ಸಿಬ್ಬಂದಿಗಳಿಗೂ ಕೂಡಾ ಕಚೇರಿಗೆ ಬರದಂತೆ ಸೂಚನೆ ನೀಡಲಾಗಿದೆ.
ಇನ್ನುಳಿದಂತೆ ಜಿಲ್ಲಾಧಿಕಾರಿ ಕಚೇರಿಯ ಕೆಲವು ಇಲಾಖೆಯ ಕೆಲಸ ಕಾರ್ಯಗಳು ಮುಂದುವರಿದಿವೆ.