ತುಮಕೂರು : ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿರುವ ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರಮಹಾಲಕ್ಷ್ಮಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ.
ಭಕ್ತರ ದರ್ಶನ ಹಾಗೂ ಪೂಜೆಗೆ ನಿರ್ಬಂಧ ವಿಧಿಸಲಾಗಿದೆ. ಜುಲೈ 20ರಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗಿದ್ದು, ಪೂಜೆ-ಪುನಸ್ಕಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ದೇವಸ್ಥಾನದ ಅರ್ಚಕರ ಎಲ್ಲರ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಮೂಲಗಳು ಸ್ಪಷ್ಟಪಡಿಸಿವೆ.
ಜುಲೈ 31ರಂದು ವರಮಹಾಲಕ್ಷ್ಮಿ ಹಬ್ಬವಿದ್ದು, ಈ ಬಾರಿ ಗೊರವನಹಳ್ಳಿಯಲ್ಲಿ ಭಕ್ತರಿಗೆ ಆಡಳಿತ ಮಂಡಳಿ ದರ್ಶನಕ್ಕೆ ಹೇಗೆ ಅವಕಾಶ ಕಲ್ಪಿಸಿ ಕೊಡಲಿದೆ ಎಂಬ ಗೊಂದಲ ಸೃಷ್ಟಿಯಾಗಿದೆ.