ತುಮಕೂರು: ಕಳ್ಳತನ ಪ್ರಕರಣದ ಆರೋಪಿಗೆ ಕೊರೊನಾ ಸೋಂಕು ತಗುಲಿದ್ದು, ಎರಡನೇ ಬಾರಿಗೆ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಪಾಸಿಟಿವ್ ದೃಢಪಟ್ಟಿದೆ.
ಕಳ್ಳತನ ಪ್ರಕರಣವೊಂದರಲ್ಲಿ ಜೂನ್ 29ರಂದು ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ, ಆತನನ್ನು ಪರೀಕ್ಷೆಗೆ ಒಳಪಡಿಸಿ ಕೋವಿಡ್ 19 ಆಸ್ಪತ್ರೆಯಲ್ಲಿನ ಕಾರಾಗೃಹ ವಾರ್ಡ್ನಲ್ಲಿ ಇರಿಸಲಾಗಿತ್ತು. ಮೊದಲಿಗೆ ನೆಗೆಟಿವ್ ಕಂಡುಬಂದಿತ್ತು. ಎರಡನೇ ಬಾರಿಗೆ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ.
ಇದೀಗ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದ್ದು, ತುಮಕೂರಿನ ಮಂಡಿಪೇಟೆ ಪೇಟೆಯಲ್ಲಿ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸುವ ಮುನ್ನ ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ ಇರುವುದರಿಂದ ಜಿಲ್ಲಾಸ್ಪತ್ರೆಯ ಕೊಠಡಿಯಲ್ಲಿ ಇರಿಸಲಾಗಿತ್ತು. ಜೂನ್ 26ರಂದು ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಇಂದು ಸೋಂಕು ಇರುವುದು ದೃಢವಾಗಿದೆ.