ETV Bharat / state

ತುಮಕೂರು: 135 ಮಂದಿಯಲ್ಲಿ ಕೊರೊನಾ ಸೋಂಕು ದೃಢ - Corona virus infects 135 people in Tumkur

ತುಮಕೂರು ಜಿಲ್ಲೆಯಲ್ಲಿ ರೋಗದ ಯಾವುದೇ ಗುಣಲಕ್ಷಣ ಹೊಂದಿಲ್ಲದ 89 ಮಂದಿ, ನಾಲ್ವರು ಗರ್ಭಿಣಿಯರು ಸೇರಿದಂತೆ ಒಟ್ಟು 135 ಮಂದಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

Tumkur
ತುಮಕೂರು
author img

By

Published : Aug 2, 2020, 9:12 PM IST

ತುಮಕೂರು: ಲಕ್ಷಣರಹಿತ 89 ಮಂದಿ, ನಾಲ್ವರು ಗರ್ಭಿಣಿಯರು ಸೇರಿದಂತೆ ಒಟ್ಟು 135 ಮಂದಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ತಿಪಟೂರು ಪೊಲೀಸ್ ಠಾಣೆಯ ಓರ್ವ ಪೊಲೀಸ್ ಸಿಬ್ಬಂದಿಯಲ್ಲಿ ಕೂಡ ಸೋಂಕು ಕಂಡು ಬಂದಿದೆ. ತುಮಕೂರು ತಾಲೂಕಿನಲ್ಲಿ 36, ತಿಪಟೂರು ತಾಲೂಕಿನಲ್ಲಿ 21, ಶಿರಾ ತಾಲೂಕಿನಲ್ಲಿ 24, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 17, ಕುಣಿಗಲ್ ತಾಲೂಕಿನಲ್ಲಿ 13, ಪಾವಗಡ ಮತ್ತು ತುರುವೇಕೆರೆ ತಾಲೂಕಿನಲ್ಲಿ ತಲಾ 7, ಕೊರಟಗೆರೆ ತಾಲೂಕಿನಲ್ಲಿ 3, ಮಧುಗಿರಿ ತಾಲೂಕಿನಲ್ಲಿ 6 ಮತ್ತು ಗುಬ್ಬಿ ತಾಲೂಕಿನಲ್ಲಿ ಓರ್ವರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1916 ಕ್ಕೆ ಏರಿಕೆಯಾಗಿದ್ದು, 888 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 54 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 971 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಇಂದು ಪುರುಷರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.