ತುಮಕೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿ, ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬೆಂಗಳೂರಿನ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿನಾಯಕ ಸ್ವಾಮಿ (35) ಹಾಗೂ ಪತ್ನಿ ಶಿಲ್ಪಾ (32) ಮೃತಪಟ್ಟವರಾಗಿದ್ದಾರೆ. ಶಿರಾ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದ್ದು, ಬಳಿಕ ಕಾರು ಪಕ್ಕದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದಂಪತಿಯ 5 ವರ್ಷದ ಮಗು ಬದುಕುಳಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮೂವರೂ ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಘಟನೆಯ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೈಸೂರು ಅತ್ಯಾಚಾರ ಆರೋಪಿ ಬಂಧನ: ಮನೆ ಖಾಲಿ ಮಾಡಿದ ಕುಟುಂಬಸ್ಥರು