ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣದ ನೇಹಾ ಬಾನು ಮತ್ತು ಶಬ್ಬಿರ್ ಎಂಬ ಪ್ರೇಮಿಗಳು ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದು, ಇದೀಗ ನಮಗೆ ರಕ್ಷಣೆ ನೀಡಬೇಕು ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ನಾವಿಬ್ಬರೂ ವಯಸ್ಕರಾಗಿದ್ದೇವೆ. ಹಾಗಾಗಿ ತಮ್ಮ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನಮಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ವಿಡಿಯೋ ಮಾಡಿದ್ದಾರೆ. ಇನ್ನೊಂದೆಡೆ ಇವರ ವಿರುದ್ಧ ಪೋಷಕರು ಮಿಸ್ಸಿಂಗ್ ಕೇಸ್ ಕೊಟ್ಟಿದ್ದಾರೆ. ಇಬ್ಬರೂ ವಯಸ್ಕರಾಗಿದ್ದು, ಸ್ವಇಚ್ಛೆಯಿಂದ ವಿವಾಹ ಆಗಿದ್ದೇವೆ. ನಮಗೆ ಪೊಲೀಸರು ರಕ್ಷಣೆ ನೀಡಬೇಕು. ಇಲ್ಲವಾದರೆ ಇಲ್ಲಿಯೇ ಆತ್ಮಹತ್ಯೆ ಮಾಡಿಕೊಂಡು ಸಾಯುತ್ತೇವೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ತುಮಕೂರು: ಗುಂಡು ಹಾರಿಸಿ ಪತ್ನಿ ಕೊಲೆ ಮಾಡಿದ ಪತಿ