ತುಮಕೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ರಕ್ಷಿಸಿರುವ ಘಟನೆ ತಿಪಟೂರು ತಾಲೂಕು ಈಚನೂರು ಗ್ರಾಮದ ಬಳಿ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕಸಾಯಿಖಾನೆಗೆ ತಿಪಟೂರಿನಿಂದ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ವಿಷಯ ತಿಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ ವಿಚಾರಿಸಿದ್ದಾರೆ. ಈ ವೇಳೆ ವಾಹನದಲ್ಲಿ 13 ಜಾನುವಾರುಗಳು ಇರುವುದು ಪತ್ತೆಯಾಗಿದೆ.
ಕಾರ್ಯಕರ್ತರು ತಿಪಟೂರು ಗ್ರಾಮಾಂತರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಾಹನದಲ್ಲಿದ್ದ ಜಾನುವಾರುಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ