ETV Bharat / state

ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಪಾಲು ನೀಡುವಂತೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ - ಭಾರತ ಕಮ್ಯುನಿಷ್ಟ್​ ಪಕ್ಷ

ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಬಾಕಿ, ಬಜೆಟ್ ಅನುದಾನದ ಬಾಕಿ ಹಾಗೂ ಕೋವಿಡ್-19 ಪರಿಹಾರದ ಮೊತ್ತವನ್ನು ಈ ಕೂಡಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಸಿಪಿಐ(ಎಂ) ಕಾರ್ಯಕರ್ತರು ಒತ್ತಾಯಿಸಿದರು.

CPI (M) protests demanding share of GST
ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಪಾಲು ನೀಡುವಂತೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ
author img

By

Published : Sep 19, 2020, 5:14 PM IST

ತುಮಕೂರು: ರಾಜ್ಯದ ಜನತೆ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಹಣವನ್ನು ರಾಜ್ಯದ ಅಭಿವೃದ್ಧಿಗೆ ನೀಡುವಂತೆ ರಾಜ್ಯದ 28 ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಆಗ್ರಹಿಸಿ ಸಿಪಿಐ (ಎಂ) ವತಿಯಿಂದ ಪ್ರತಿಭಟಿಸಲಾಯಿತು.

ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಪಾಲು ನೀಡುವಂತೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ

ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ರಾಜ್ಯದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಜನತೆಯ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಬಾಕಿ, ಬಜೆಟ್ ಅನುದಾನದ ಬಾಕಿ ಹಾಗೂ ಕೋವಿಡ್-19 ಪರಿಹಾರದ ಮೊತ್ತವನ್ನು ಈ ಕೂಡಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಎನ್​.ಸುಬ್ರಹ್ಮಣ್ಯ, ಕೇಂದ್ರದ ವಿತ್ತ ಸಚಿವರು ಸಭೆ ನಡೆಸಿ ರಾಜ್ಯಗಳಿಗೆ ನೀಡಬೇಕಿರುವ ಜಿಎಸ್​ಟಿ ಪಾಲನ್ನು ನೀಡಲು ಸಾಧ್ಯವಿಲ್ಲ. ನಿಮ್ಮ ರಾಜ್ಯಗಳ ಅಭಿವೃದ್ಧಿಗೆ ಸಾಲ ಪಡೆದುಕೊಳ್ಳಿ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಸಿಪಿಎಂ ಪಕ್ಷ ಖಂಡಿಸುತ್ತದೆ. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ನಮ್ಮ ರಾಜ್ಯದ 28 ಸಂಸದರು ರಾಜ್ಯದ ಜಿಎಸ್​ಟಿ ಪಾಲನ್ನು ತರಲು ವಿಫಲರಾಗಿದ್ದಾರೆ.

ಈಗಲಾದರೂ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿ, ಜಿಎಸ್​ಟಿ ಪಾಲನ್ನು ರಾಜ್ಯಕ್ಕೆ ತರುವ ಕಾರ್ಯ ಮಾಡಬೇಕಿದೆ. ರಾಜ್ಯ ಸರ್ಕಾರಗಳನ್ನು ಕೇಂದ್ರ ಸರ್ಕಾರ ಭಿಕ್ಷುಕ ಸರ್ಕಾರಗಳನ್ನಾಗಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.