ETV Bharat / state

Tumkuru crime: ವಿದೇಶಿ ಪ್ರಜೆಗಳಿಂದ ಸಮಾಜ ಕಲ್ಯಾಣ ಅಧಿಕಾರಿ, ಪೊಲೀಸರು ಹಾಗೂ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ - staff of the refugee center were attack

ವಿದೇಶಿ ಪ್ರಜೆಗಳು ಸಮಾಜಕಲ್ಯಾಣ ಅಧಿಕಾರಿ, ಮಹಿಳಾ ಪೊಲೀಸ್​ ಸಿಬ್ಬಂದಿ ಹಾಗೂ ನಿರಾಶ್ರಿತ ಕೇಂದ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

police-and-staff-of-the-refugee-center-were-attacked-by-foreigners-in-tumkur
ವಿದೇಶಿ ಪ್ರಜೆಗಳಿಂದ ಸಮಾಜ ಕಲ್ಯಾಣ ಅಧಿಕಾರಿ, ಪೊಲೀಸರು ಹಾಗೂ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ
author img

By

Published : Jul 8, 2023, 7:03 AM IST

ತುಮಕೂರು : ಓರ್ವ ಸಮಾಜ ಕಲ್ಯಾಣ ಅಧಿಕಾರಿ, ಮಹಿಳಾ ಪೊಲೀಸ್​ ಸಿಬ್ಬಂದಿ ಹಾಗೂ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ವಿದೇಶಿ ಪ್ರಜೆಗಳು ದಾಳಿ ನಡೆಸಿರುವ ಘಟನೆ ನಗರದ ದಿಬ್ಬೂರಿನಲ್ಲಿರುವ ವಿದೇಶಿ ಪ್ರಜೆಗಳ ನಿರಾಶ್ರಿತ ಕೇಂದ್ರದಲ್ಲಿ ಶುಕ್ರವಾರ ನಡೆದಿದೆ. ಪಿಎಸ್ಐ ಚಂದ್ರಕಲಾ, ಡಬ್ಲ್ಯೂ ಪಿಸಿ ತಾಸೀನಾ ಬಾನು ಹಾಗೂ ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ವಿದೇಶಿ ಪ್ರಜೆಗಳು ದಾಳಿ ನಡೆಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಗರದ ದಿಬ್ಬೂರಿನಲ್ಲಿರುವ ವಿದೇಶಿ ಪ್ರಜೆಗಳ ನಿರಾಶ್ರಿತ ಕೇಂದ್ರಕ್ಕೆ ಶುಕ್ರವಾರ ಸಂಜೆ 4.30ರ ಸುಮಾರಿಗೆ ನಿರಾಶ್ರಿತ ಕೇಂದ್ರ ಸಿಬ್ಬಂದಿ ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ನಾಲ್ವರು ವಿದೇಶಿ ಮಹಿಳೆಯರು ಕೊಠಡಿಯಲ್ಲಿ ಕೂಡಿ ಹಾಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಚಾಕು ಹಿಡಿದು ಕೊಲೆಗೆ ಯತ್ನ ನಡೆಸಿದ್ದಾರೆ. ಈ ನಿರಾಶ್ರಿತ ಕೇಂದ್ರದಲ್ಲಿ ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರನ್ನು ಇರಿಸಲಾಗಿದ್ದು, ಒಟ್ಟು 27 ಜನರಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಳೆದ ಎರಡು ತಿಂಗಳ ಹಿಂದೆ ತುಮಕೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತರ ಕೇಂದ್ರ ಪ್ರಾರಂಭವಾಗಿದೆ. ಈ ಕೇಂದ್ರದಲ್ಲಿ ಒಟ್ಟು 27 ವಿದೇಶಿ ಪ್ರಜೆಗಳಿದ್ದಾರೆ. ಬೇರೆ ಬೇರೆ ಕಾರಣಗಳಿಂದ ಹಾಗೂ ವೀಸಾ ಮುಗಿದ ಹಿನ್ನೆಲೆ ವಿದೇಶಿಗರನ್ನು ಇಲ್ಲಿ ತಂದು ಇರಿಸಲಾಗಿದೆ ಎಂದರು.

ಶುಕ್ರವಾರ ಸಂಜೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಜೊತೆಗೆ ನಿರಾಶ್ರಿತ ಕೇಂದ್ರಕ್ಕೆ ಪರಿಶೀಲನೆಗೆ ಬಂದಿದ್ದರು. ಈ ವೇಳೆ‌ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ನಮ್ಮ ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ನಾಲ್ಕು ಮಹಿಳಾ ಪೊಲೀಸ್ ಪೇದೆಗಳ ಮೇಲೆ‌ ಹಾಗೂ ಒಬ್ಬರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು. ಈ ನಿರಾಶ್ರಿತ ಶಿಬಿರದಲ್ಲಿ ಒಟ್ಟು 27 ಜನ ವಿದೇಶಿ ಪ್ರಜೆಗಳಿದ್ದಾರೆ. ಅದರಲ್ಲಿ ನಾಲ್ಕು ಜನ ಮಾತ್ರ ಈ ರೀತಿಯಾಗಿ ವರ್ತನೆ ಮಾಡಿದ್ದಾರೆ. ಹಲ್ಲೆ ಮಾಡಿರುವ ವಿದೇಶಿ ಪ್ರಜೆಗಳು ಸದ್ಯಕ್ಕೆ ಯಾವ ದೇಶದವರು ಎಂಬ ಮಾಹಿತಿ ಇಲ್ಲ ಎಂದರು. ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತೇವೆ. ನಿರಾಶ್ರಿತರ ಕೇಂದ್ರದಲ್ಲಿ ಬಾಂಗ್ಲಾದೇಶ, ನೈಜಿರಿಯಾ ಸೇರಿದಂತೆ ಒಟ್ಟು 5 ದೇಶದ ಪ್ರಜೆಗಳು ಇದ್ದಾರೆ ಎಂದು ಮಾಹಿತಿ ನೀಡಿದರು. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಮನೆಗೆ ನುಗ್ಗಿದ ಲಾರಿ: ಇಬ್ಬರಿಗೆ ಗಂಭೀರ ಗಾಯ, ಅಂಗಡಿ ಜಖಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.