ತುಮಕೂರು: ನಗರ ಸ್ಮಾರ್ಟ್ ಸಿಟಿ ಯೋಜನೆಗೆ ಪೂರಕವಾದ ಅಭಿವೃದ್ಧಿ ಕಾರ್ಯಕ್ರಮಗಳು ಭರದಿಂದ ಸಾಗಿವೆ. ಈ ಮಧ್ಯೆ ನಗರದಲ್ಲಿ ಅಪರಾಧ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ನಗರ ಶಾಸಕ ಜ್ಯೋತಿ ಗಣೇಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಸುಮಾರು 15 ವರ್ಷಗಳ ಹಿಂದೆ ನಗರದಲ್ಲಿ ಚೂರಿ ಇರಿತ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳು ನಡೆದರೆ, ಪೊಲೀಸರು ನಿರ್ದಿಷ್ಟವಾಗಿ ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಲು ಪೊಲೀಸರಿಗೂ ಕೂಡ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಒಂದು ರೀತಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಡೆಸಿದರೆ ಹೆಸರು ಮಾಡಬಹುದು ಎಂಬ ಹುಚ್ಚಾಟದಲ್ಲಿ ಯುವಕರು ತೊಡಗಿದ್ದಾರೆ ಎಂಬ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಚರ್ಚೆಯಲ್ಲಿ ವಿಷಯ ಪ್ರಸ್ತಾಪವಾಗಿದೆ ಎಂದು ಶಾಸಕ ಜ್ಯೋತಿಗಣೇಶ್ ತಿಳಿಸಿದ್ದಾರೆ.