ತುಮಕೂರು: ಪಡಿತರ ವಿತರಣೆ ಮಾಡಲು ಕಳಪೆ ಗುಣಮಟ್ಟದ ಬೇಳೆ ಸರಬರಾಜು ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಖಾತೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. ತುಮಕೂರು ತಾಲೂಕಿನ ಬುಗುಡನಹಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಿ ಕಳಪೆ ಬೇಳೆ ಸರಬರಾಜು ಆಗಿದೆ ಅದನ್ನು ಜನರಿಗೆ ವಿತರಣೆ ಮಾಡಬಾರದು ಎಂದು ಸೂಚಿಸಿದ್ದೇನೆ ಎಂದರು.
ಅಲ್ಲದೆ ಈಗಾಗಲೇ ರಾಯಚೂರಿನಲ್ಲಿ ಕೇಸು ದಾಖಲಿಸಲಾಗಿದೆ. ಅಂತಹ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಮಾಡಲು ಈಗಾಗಲೇ ಸೂಚಿಸಿದ್ದೇನೆ ಎಂದರು.
ಕಳಪೆ ಮಟ್ಟದ ಬೇಳೆ ಬಂದಲ್ಲಿ ರೇಷನ್ ಅಂಗಡಿಯವರು ಕೂಡಲೇ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು. 24 ಗಂಟೆಗಳಲ್ಲಿ ಗುತ್ತಿಗೆದಾರರ ಬದಲಾವಣೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.