ತುಮಕೂರು: ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕುರಿತು ಪ್ರತಿಪಕ್ಷದವರ ಟೀಕೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಟಾಂಗ್ ಕೊಟ್ಟಿದ್ದಾರೆ.
ನಗರದ ಎಪಿಎಂಸಿಯಲ್ಲಿ ನೂತನ ನಾಮನಿರ್ದೇಶಿತ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿ ಪಕ್ಷದವರ ಟೀಕೆ ಮತ್ತು ವ್ಯಂಗ್ಯ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಆಶೀರ್ವಾದ ಇದ್ದಂಗೆ ಎಂದರು.
ಉತ್ತರ ಕರ್ನಾಟಕ ಭಾಗದ ಬಹುತೇಕ ಗ್ರಾಮಗಳನ್ನು ಈಗಾಗಲೇ ಗ್ರಾಮ ವಾಸ್ತವ್ಯಕ್ಕಾಗಿ ಮುಖ್ಯಮಂತ್ರಿ ಆಯ್ಕೆ ಮಾಡಿಕೊಂಡಿದ್ದಾರೆ. ಅದರಲ್ಲೂ ಶಾಲೆಗಳಲ್ಲಿ ಗ್ರಾಮವಾಸ್ತವ್ಯ ಮಾಡುವ ವಿಷಯವನ್ನು ತಿಳಿಸಿದ್ದಾರೆ ಎಂದರು. ಐದು ವಷ೯ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ, ಕುಮಾರಸ್ವಾಮಿ ಅವರೇ ಸಿಎಂ ಆಗಿತಾ೯ರೆ ಎಂಬ ವಿಶ್ವಾಸವನ್ನು ಶಾಸಕ ವ್ಯಕ್ತಪಡಿಸಿದ್ರು.