ತುಮಕೂರು : ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಿಂಗನಗಿರಿ ಗ್ರಾಮದವರಾದ ಶೋಭಾ ಅವರು ವಾಸಿಸುತ್ತಿದ್ದ ಕೆ.ಹೆಚ್.ಬಿ ಕಾಲೋನಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.
ಎಂದಿನಂತೆ ಶೋಭ ಸಿಲಿಂಡರ್ ಆನ್ ಮಾಡಿ ಟೀ ಮಾಡುವ ವೇಳೆ ರೆಗ್ಯುಲೇಟರ್ ಕಳಚಿಕೊಂಡು, ಸಿಲಿಂಡರ್ ಸ್ಫೋಟಗೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿದ್ದ ಟಿವಿ, ಪ್ರಿಡ್ಜ್, ವಾಷಿಂಗ್ ಮಷಿನ್ ಸೇರಿದಂತೆ ಲಕ್ಷಾಂತ ರೂಪಾಯಿ ಬೆಲೆ ಬಾಳುವ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಾಗಲಕೋಟೆ: ಡೀಸೆಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿಗಾಹುತಿ