ETV Bharat / state

ದಲಿತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ: ದಲಿತ ಸಂಘರ್ಷ ಸಮಿತಿ ಆರೋಪ - latest tumkur news

ತುಮಕೂರು ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಬೇಸರ ವ್ಯಕ್ತಪಡಿಸಿದರು.

dalita sangharsha samiti
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್ ರಾಮಯ್ಯ
author img

By

Published : Jun 1, 2020, 7:38 PM IST

Updated : Jun 1, 2020, 8:11 PM IST

ತುಮಕೂರು: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ದಲಿತ ಅಧಿಕಾರಿಗಳ ರಕ್ಷಣೆಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಕಾರ್ಯ ನಡೆಯುತ್ತಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಸರ್ಕಾರ ಈ ಕ್ರಮವನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ

ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು, ಸಂಸದರು ಹಾಗೂ ಎಲ್ಲಾ ಶಾಸಕರು ದಲಿತ ಅಧಿಕಾರಿಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

Last Updated : Jun 1, 2020, 8:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.