ETV Bharat / state

ಇನ್ನೂ ಸಲ್ಲಿಕೆಯಾಗದ ನಾಮಪತ್ರ: 2 ಗ್ರಾ.ಪಂಗಳಿಗೆ ಆಡಳಿತಾಧಿಕಾರಿಗಳ ನೇಮಕ - DC appointed the Administrative Officer

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ರೂ ಗ್ರಾಮದ ಯಾರೊಬ್ಬರೂ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ 2 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಡಿಸಿ ಆದೇಶಿಸಿದ್ದಾರೆ.

DC
ರಾಕೇಶ್ ಕುಮಾರ್
author img

By

Published : Dec 12, 2020, 9:40 PM IST

ತುಮಕೂರು: ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಆಗ್ರಹಿಸಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಗಡಿ ಗ್ರಾಮಗಳಾದ ಅಂಕಸಂದ್ರ ಹಾಗೂ ಮಂಚಲದೂರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 36 ಗ್ರಾಮಗಳಲ್ಲಿ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ 2 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯುತ್ತಿಲ್ಲ.

ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾಹಿತಿ ನೀಡಿದ ಡಿಸಿ

15 ದಿನಗಳಿಂದ ಶಾಶ್ವತ ನೀರಾವರಿಗಾಗಿ ಆಗ್ರಹಿಸಿ ಗ್ರಾಮಸ್ಥರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿಕೆ ಕೊಟ್ಟಿದ್ದರು. ಈ ನಡುವೆ ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಸಾಕಷ್ಟು ಸಭೆ ನಡೆಸಿದರೂ ಫಲಪ್ರದವಾಗಿರಲಿಲ್ಲ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ರೂ ಗ್ರಾಮದ ಯಾರೊಬ್ಬರೂ ನಾಮಪತ್ರ ಸಲ್ಲಿಸಿರಲಿಲ್ಲ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲದೇ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.