ETV Bharat / state

ಗ್ರಾಪಂ ಸದಸ್ಯ ಸ್ಥಾನಗಳ ಹರಾಜು: ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಡಿಸಿ ಕಟ್ಟಪ್ಪಣೆ

author img

By

Published : Dec 14, 2020, 8:03 PM IST

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳು ಆಯಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಸಭೆ
DC K Rakesh made meeting

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯರ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ, ಬಲವಂತದ ಅವಿರೋಧ ಆಯ್ಕೆ ಕುರಿತ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್​ಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್​ಗಳು ಮತ್ತು ನೋಡೆಲ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಗ್ರಾಪಂಗಳ ಸದಸ್ಯರ ಸ್ಥಾನಗಳಿಗೆ ಹರಾಜು, ಅವಿರೋಧ ಆಯ್ಕೆಯಾಗುವುದಕ್ಕೆ ಒಪ್ಪಂದ ಆಗಿರುವುದರ ಬಗ್ಗೆ ದೂರುಗಳು ಬಂದಲ್ಲಿ ಕೂಡಲೇ ಪರಿಶೀಲನೆ ನಡೆಸಬೇಕು. ಮೇಲ್ನೋಟಕ್ಕೆ ನಿಜವೆಂದು ಕಂಡು ಬಂದರೆ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಿಯಮಾನುಸಾರ ಕ್ರಮಕೈಗೊಳ್ಳಲು ಈಗಾಗಲೇ ಸಬ್ ಡಿವಿಷನ್ ಮ್ಯಾಜಿಸ್ಟ್ರೇಟ್‍ರವರಿಗೆ ನಿರ್ದೇಶನ ಅಲ್ಲದೇ ಪೊಲೀಸ್ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದರು.

ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಆದೇಶ:

ಹರಾಜು ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ತುರುವೇಕೆರೆ ತಾಲೂಕಿನ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರ ಮೇಲೆ ಎಫ್‍ಐಆರ್ ದಾಖಲಿಸಿ ಎಂದು ತಹಶೀಲ್ದಾರ್ ಅವರಿಗೆ ಡಿಸಿ ಸೂಚನೆ ನೀಡಿದರು.

ಚುನಾವಣಾ ತರಬೇತಿ ಮುಖ್ಯ:

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣಾ ಮತದಾನ ನಡೆಸಲು ಮತಗಟ್ಟೆ ಸಿಬ್ಬಂದಿಗೆ ತರಬೇತಿ ಅತಿಮುಖ್ಯವಾಗಿದೆ. ಚುನಾವಣಾ ವೇಳಾಪಟ್ಟಿಯಂತೆ ಚುನಾವಣಾಧಿಕಾರಿಗಳು ಕರ್ತವ್ಯಗಳನ್ನು ನಿರ್ವಹಿಸಬೇಕು. ಮತಗಟ್ಟೆ ಸಿಬ್ಬಂದಿ ಚುನಾವಣಾ ತರಬೇತಿಗೆ ಗೈರು ಹಾಜರಾದರೆ ಅಂತಹ ಸಿಬ್ಬಂದಿ ಮೇಲೆ ಚುನಾವಣಾ ಮಾರ್ಗಸೂಚಿಗಳನ್ವಯ ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ಓದಿ : ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾಗೆ ಜಾಮೀನು ನಿರಾಕರಣೆ

ಜಿಲ್ಲೆಯ ಶಿರಾ ತಾಲೂಕಿನ ಗೋಪಾಲದೇವರಹಳ್ಳಿ ಸೇರಿದಂತೆ ಜಿಲ್ಲೆಯ ಕೆಲವು ಕಡೆ ನಾಮಪತ್ರ ಸಲ್ಲಿಕೆ ಮಾಡುತ್ತಿಲ್ಲ. ಅಂತಹ ಸ್ಥಳಗಳಿಗೆ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್​ಗಳು ತೆರಳಿ ಮನವೊಲಿಕೆಗೆ ಮುಂದಾಗಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ಚುನಾವಣಾ ಶಾಖೆಯ ನಾಗಭೂಷಣ್, ರವಿ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.