ತುಮಕೂರು: 73ನೇ ಸ್ವಾತಂತ್ರೋತ್ಸವವನ್ನು ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್ ದ್ವಜರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ, ಬಲಿದಾನಗಳ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಂದಿದೆ ಎಂದರು.
ಇದೇ ವೇಳೆ ಪೊಲೀಸ್ ಇಲಾಖೆ ಮತ್ತು ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್, ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದು ಭಾರತ ಸ್ವಾತಂತ್ರ್ಯ ಪಡೆದ ದಿನ ಇದು. ಆಂಗ್ಲರ ಆಳ್ವಿಕೆಯಿಂದ ದೇಶವನ್ನು ಮುಕ್ತಿಗೊಳಿಸಲು ಸಾವಿರಾರು ಹೋರಾಟಗಾರರು, ದೇಶಪ್ರೇಮಿಗಳು, ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ, ಬಲಿದಾನಗಳ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಂದಿದೆ ಎಂದರು.