ತುಮಕೂರು: ಗ್ರಾಮ ಪಂಚಾಯ್ತಿ ಚುನಾವಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಾಕಷ್ಟು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸನ್ಮಾನಿಸುವ ಜನಸೇವಕ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ರೀತಿಯಲ್ಲೂ ಪಕ್ಷದ ಚಿಹ್ನೆಯಡಿ ಚುನಾವಣೆ ಎದುರಿಸಲು ಅವಕಾಶವಿರಲಿಲ್ಲ. ಆದರೆ, ಬಿಜೆಪಿ ಬೆಂಬಲಿತ ಹೆಚ್ಚು ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.