ತುಮಕೂರು: ಕಾಂಗ್ರೆಸ್ನಲ್ಲಿ ಬರೋಬ್ಬರಿ ಹತ್ತು ಮಂದಿ ರಾಜ್ಯದ ಮುಖ್ಯಮಂತ್ರಿಯಾಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಮಾತನಾಡಿರುವ ಅವರು, ನಿಮಗೆ ಸಿಎಂ ಆಗುವ ಆಸೆ ಇದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ.
ರಾಜಕೀಯಕ್ಕೆ ಬರುವುದು ಯಾಕೆ ಹೇಳಿ? ಅಧಿಕಾರ ಹಿಡಿಯೋಕೆ ತಾನೇ? ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ. ಅಲ್ಲದೇ ನಮ್ಮ ಪಕ್ಷ ದಲಿತ ಸಿಎಂ ಎಂದು ಜಾತಿ ಆಧಾರದ ಮೇಲೆ ಆಯ್ಕೆ ಮಾಡಲ್ಲ. ಆಯಾ ಸಂದರ್ಭಕ್ಕೆ ಯಾರು ಸಮರ್ಥರಿದ್ದಾರೋ, ಅಂಥವರನ್ನು ಹೈಕಮಾಂಡ್ ಸಿಎಂ ಮಾಡುತ್ತೆ ಎಂದು ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು: ಸಚಿವ ಅಶ್ವತ್ಥನಾರಾಯಣ್ ವಿವಾದ