ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಗುರುವಾರ ಕುಸಿದುಬಿದ್ದಿದ್ದು, ಸ್ಥಳಕ್ಕೆ ಇಂದು ಡಿಡಿಪಿಐ ಎಂ ಆರ್ ಕಾಮಾಕ್ಷಿ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಚಿಕ್ಕನಾಯಕನಹಳ್ಳಿ ಬಿಇಒ ಅವರಿಂದ ಶಾಲಾ ಕಟ್ಟಡದ ದುರಸ್ತಿಗೆ ಸಂಬಂಧಪಟ್ಟಂತೆ ಮಾಹಿತಿ ಕಲೆಹಾಕಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರಾಮಚಂದ್ರಯ್ಯ ಹಾಜರಿದ್ದರು.
20 ಮಕ್ಕಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.