ತುಮಕೂರು : ಜಿಲ್ಲೆಯ ಎಎಸ್ಐ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚೇಳೂರು ಪೊಲೀಸ್ ಠಾಣೆ ಎಎಸ್ಐ ಭುವನೇಶ್ವರ್ ಮೃತ ದುರ್ದೈವಿ. ಗುಬ್ಬಿ ತಾಲೂಕಿನ ಉದ್ದೇಹೊಸಕೆರೆ ಸಮೀಪ ಬೈಕ್ ನಲ್ಲಿ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.