ETV Bharat / state

ತಮಗೆ ರಕ್ಷಣೆ ನೀಡುವಂತೆ ಎಸ್​ಪಿ ಮೊರೆ ಹೋದ ಜೆಡಿಎಸ್ ಶಾಸಕ ಗೌರಿಶಂಕರ್! - ಈಟಿವಿ ಭಾರತ ಕನ್ನಡ

ಮಾಜಿ ಶಾಸಕ ಸುರೇಶ್ ಗೌಡ ಅವರು ನನ್ನನ್ನು ಕೊಲೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಗಂಭೀರ ಆರೋಪ ಮಾಡಿದ್ದಾರೆ.

death-threat-from-former-mla-suresh-gowda-to-jds-mla-gowri-shankar
ಮಾಜಿ ಶಾಸಕ ಸುರೇಶ್ ಗೌಡರಿಂದ ಕೊಲೆ ಬೆದರಿಕೆ : ರಕ್ಷಣೆಗಾಗಿ ಎಸ್ಪಿಗೆ ಮೊರೆ ಹೋದ ಜೆಡಿಎಸ್ ಶಾಸಕ ಗೌರಿಶಂಕರ್
author img

By

Published : Nov 23, 2022, 10:12 PM IST

Updated : Nov 24, 2022, 12:18 PM IST

ತುಮಕೂರು : ಮಾಜಿ ಶಾಸಕ ಸುರೇಶ್ ಗೌಡ ಅವರು ನನ್ನನ್ನು ಕೊಲೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿರುವುದಾಗಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ತಿಳಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುರೇಶ್ ಗೌಡ ಅವರು ನನ್ನ ಕೊಲೆ ಮಾಡಲು ಸಂಚು ರೂಪಿಸಿರುವ ಅನುಮಾನ ಇದೆ. ನನ್ನನ್ನು ಕೊಲೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು. ಅಕಸ್ಮಾತ್ ನಾನು ಅವರ ಕೊಲೆ ಮಾಡಲು ಸಂಚು ರೂಪಿಸಿದ್ದರೆ, ಅವರದೇ ಬಿಜೆಪಿ ಪಕ್ಷದ ಸರ್ಕಾರವಿದೆ. ಈ ಕುರಿತಂತೆ ಸಿಬಿಐ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಜೆಡಿಎಸ್ ಶಾಸಕ ಗೌರಿಶಂಕರ್

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿಯೂ ನಾನು ಪ್ರಸ್ತಾಪ ಮಾಡುತ್ತೇನೆ. ಅವರು ನನ್ನ ಮೇಲೆ ಮಾಡಿರುವ ಆರೋಪದ ಸತ್ಯಾಸತ್ಯತೆ ಬೆಳಕಿಗೆ ಬರಬೇಕು ಎಂದು ಹೇಳಿದರು.

ಇದನ್ನೂ ಓದಿ : ಕಾರ್ಯಕರ್ತರ ಪ್ರತಿಭಟನೆ, ಮೊಕದ್ದಮೆ ಮಾಹಿತಿ ಸಂಗ್ರಹಕ್ಕೆ ಡಿ ಕೆ ಶಿವಕುಮಾರ್ ಸೂಚನೆ

Last Updated : Nov 24, 2022, 12:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.