ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು, ಬೋರನಕಣಿವೆ ಅಗ್ರಹಾರದ ಭೂತರಾಯ ಸ್ವಾಮಿ ದೇವಸ್ಥಾನದ ಸಮೀಪ ಅಪರಿಚಿತ ಶವವೊಂದು ಪತ್ತೆಯಾಗಿದೆ.
ಮೃತಪಟ್ಟಿರುವ ವ್ಯಕ್ತಿಗೆ ಸುಮಾರು 40 ವರ್ಷದ ವಯಸ್ಸಾಗಿದ್ದು, ಈತ ಯಾರೆಂಬುದು ಇನ್ನು ತಿಳಿದು ಬಂದಿಲ್ಲ. ಈತನಿಗೆ ಊಟ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.