ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರ ಪ್ರತಿಭಟನೆ.. - Disability's protest in Thumkur for Demanding the fulfillment of various demands

ವಿಕಲಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತುಮಕೂರು ನಗರ ಅಂಗವಿಕಲರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

Disability's protest in Thumkur
ವಿಕಲಚೇತನರಿಂದ ತುಮಕೂರಿನಲ್ಲಿ ಪ್ರತಿಭಟನೆ
author img

By

Published : Feb 3, 2020, 6:22 PM IST

ತುಮಕೂರು: ವಿಕಲಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತುಮಕೂರು ನಗರ ಅಂಗವಿಕಲರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದ ವಿಕಲಚೇತನರು ಮಾಸಾಶನದ ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬ ಧೋರಣೆ ನಿಲ್ಲಿಸಬೇಕು. ಯುಆರ್‌ಡಬ್ಲ್ಯೂಗಳ 8 ತಿಂಗಳ ಗೌರವಧನವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ವಿಕಲಚೇತನರ ಕುಂದು ಕೊರತೆ ಸಭೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಡ್ಡಾಯವಾಗಿ ನಡೆಸಬೇಕು. ಸ್ಮಾರ್ಟ್ ಸಿಟಿ ಯೋಜನೆಗಳು ಅಂಗವಿಕಲರ ಬೆಳವಣಿಗೆಗೆ ಪೂರಕವಾಗಿರಬೇಕು ಹಾಗೂ ಭಾಗವಹಿಸುವಿಕೆಗೆ ಅವಕಾಶವಿರುವಂತೆ ಇರಬೇಕು ಎಂದು ಒತ್ತಾಯಿಸಿದರು.

ವಿಕಲಚೇತನರಿಂದ ತುಮಕೂರಿನಲ್ಲಿ ಪ್ರತಿಭಟನೆ..

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಮಂಜುಳ, ಯುಆರ್​​ಡಬ್ಲ್ಯೂ ಆಗಿ ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ನಿರ್ವಹಿಸುತ್ತಿದೆ. ಈಗ ಕೆಲಸದಿಂದ ನನ್ನನ್ನು ವಜಾಗೊಳಿಸಲಾಗಿದೆ. ಹಾಗಾಗಿ ಜೀವನ ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಕಳೆದ ಒಂದು ವರ್ಷದಿಂದ ಗೌರವ ಧನ ಕೂಡ ನೀಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Intro:ತುಮಕೂರು: ವಿಕಲಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತುಮಕೂರು ನಗರ ಅಂಗವಿಕಲರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಪ್ರತಿಭಟನೆ ನಡೆಸಲಾಯಿತು.

Body:ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ವಿಕಲಚೇತನರು ಮಾಸಾಶನದ ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬ ಧೋರಣೆಯನ್ನು ನಿಲ್ಲಿಸಬೇಕು, ಯು ಆರ್ ಡಬ್ಲ್ಯೂ ಗಳ 8 ತಿಂಗಳ ಗೌರವಧನವನ್ನು ನೀಡಬೇಕು, ಪ್ರತಿ ಮೂರು ತಿಂಗಳಿಗೆ ಒಮ್ಮೆ ವಿಕಲಚೇತನರ ಕುಂದುಕೊರತೆ ಸಭೆಯನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಡ್ಡಾಯವಾಗಿ ನಡೆಸಬೇಕು, ಸ್ಮಾರ್ಟ್ ಸಿಟಿ ಯೋಜನೆಗಳು ಅಂಗವಿಕಲರ ಬೆಳವಣಿಗೆಗೆ ಪೂರಕವಾಗಿರಬೇಕು ಹಾಗೂ ಭಾಗವಹಿಸುವಿಕೆಗೆ ಅವಕಾಶವಿರುವಂತೆ ಇರಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಮಂಜುಳ, ಯು ಆರ್ ಡಬ್ಲ್ಯೂ ಆಗಿ ಮಹಾನಗರಪಾಲಿಕೆಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಈಗ ಕೆಲಸದಿಂದ ನನ್ನನ್ನು ವಜಾಗೊಳಿಸಲಾಗಿದೆ. ಹಾಗಾಗಿ ಜೀವನ ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಕಳೆದ ಒಂದು ವರ್ಷದಿಂದ ಗೌರವಧನ ಸಹ ನಮಗೆ ನೀಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬೈಟ್: ಮಂಜುಳ, ಅಧ್ಯಕ್ಷೆ, ತುಮಕೂರು ನಗರ ಅಂಗವಿಕಲರ ಒಕ್ಕೂಟ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.