ತುಮಕೂರು: ಪಡಿತರ ವಿತರಣೆಯಲ್ಲಿ ಗ್ರಾಹಕರಿಗೆ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ದೂರಿನ ಮೇರೆಗೆ ಅಂಗಡಿಯಲ್ಲಿದ್ದ ಪಡಿತರವನ್ನು ತಹಶೀಲ್ದಾರ್ ವಶಕ್ಕೆ ಪಡೆದು ಬೇರೆಯವರಿಗೆ ವಿತರಿಸುವ ಜವಾಬ್ದಾರಿಯನ್ನು ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ನಗರದ ಚಿಕ್ಕಪೇಟೆಯಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದ ಸೈಯದ್ ಖಾಲಿದ್ ಅಹ್ಮದ್ ಎಂಬ ವ್ಯಕ್ತಿ ಪಡಿತರ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿತ್ತು. ಈ ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಮೋಹನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು. ಆಗ ಸ್ಥಳದಲ್ಲಿದ್ದ ಫಲಾನುಭವಿಗಳು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅದಕ್ಕಾಗಿ ಏಪ್ರಿಲ್ 7 ರಿಂದ ಪಡಿತರ ಕೊಟ್ಟಿಲ್ಲ ಎಂದು ಆರೋಪಿಸಿದರು.
ನ್ಯಾಯ ಬೆಲೆ ಅಂಗಡಿಯಲ್ಲಿದ್ದ ಕಂಪ್ಯೂಟರ್, ಸ್ಕೇಲ್ಗಳ ಸಮೇತ ಹೊರ ಹೋಗುವಂತೆ ಸೈಯದ್ ಖಾಲಿದ್ ಅವರಿಗೆ ತಹಶೀಲ್ದಾರ್ ಸೂಚಿಸಿದ್ದು, ಬೇರೊಬ್ಬರಿಗೆ ಪರವಾನಗಿ ನೀಡಿ, ಸಂಜೆಯಿಂದಲೇ ಗ್ರಾಹಕರಿಗೆ ಪಡಿತರ ವಿತರಣೆ ಮಾಡುವಂತೆ ತಿಳಿಸಿದರು.
ಸಂಜೆ 5 ಗಂಟೆಗೆ ಪಡಿತರ ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.