ತುಮಕೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುದಾನ ಬಳಕೆಯ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ಈ ಕುರಿತು ಮಾತನಾಡಿದ ಅವರು ಸಚಿರಾದಾಗಿನಿಂದ ಒತ್ತಡದ ಕಾರಣ ದಿಶಾ ಸಭೆ ನಡೆಸಲಾಗಿರಲಿಲ್ಲ. ಇನ್ನೂ ಸರ್ಕಾರಿ ಯೋಜನೆಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಅದಕ್ಕೆ ಬೇಕಾದ ಮಾರ್ಗದರ್ಶನವನ್ನು ನೀಡಿದ್ದೇವೆ ಎಂದು ಹೇಳಿದರು.
ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ಶ್ರೀಲಂಕಾದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ನಿವಾಸಕ್ಕೆ ನುಗ್ಗಲು ಯತ್ನ, ತುರ್ತು ಪರಿಸ್ಥಿತಿ ಘೋಷಣೆ