ತುಮಕೂರು: ಜಿಲ್ಲೆಯಲ್ಲಿ ಅತಿ ಹೆಚ್ಚು ಸೋಂಕಿತರು ಇರುವಂತಹ ಗ್ರಾಮಗಳಿಗೆ ಜಿಲ್ಲಾಡಳಿತ ಭೇಟಿ ನೀಡಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವಂತಹ ಕಾರ್ಯ ಮಾಡುತ್ತಿದೆ.
ಇಂದು ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಜಿಲ್ಲಾಧಿಕಾರಿ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ಸೇರಿದಂತೆ ವೈದ್ಯಕೀಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಸೋಂಕಿನಿಂದ ಬಳಲುತ್ತಿರುವರ ಮನೆಗಳ ಬಳಿಯೇ ತೆರಳಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿ, ಸೋಂಕು ಹರಡುವಿಕೆಗೆ ಅವಕಾಶ ನೀಡದಂತೆ ಎಚ್ಚರವಹಿಸಿ ಎಂದು ತಿಳಿಸಿದರು.
ಈ ಮೂಲಕ ಜಿಲ್ಲೆಯಲ್ಲಿ ರೆಡ್ ಜೋನ್ ಎಂದು ಪರಿಗಣಿಸಿರುವ ಗ್ರಾಮಗಳಿಗೆ ನಿರಂತರವಾಗಿ ಜಿಲ್ಲಾಡಳಿತ ತೆರಳಿ ಅಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನುಪರಿಶೀಲನೆ ನಡೆಸುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಪ್ರಯತ್ನ ನಡೆಸುತ್ತಿದೆ.