ETV Bharat / state

ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ವೃದ್ಧರಿಂದ ಜಿಲ್ಲಾಧಿಕಾರಿಗೆ ಅರ್ಜಿ - ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧ

ಮಗನಿಗೆ ಹೆಣ್ಣು ಕೊಡಿಸಿ ಎಂದು ಜಿಲ್ಲಾಧಿಕಾರಿಗೆ ವೃದ್ಧರೊಬ್ಬರು ಮನವಿ ಸಲ್ಲಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧದಲ್ಲಿ ನಡೆದಿದೆ.

district-collector-janatha-darshan-at-tumkur
ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ವೃದ್ಧರಿಂದ ಜಿಲ್ಲಾಧಿಕಾರಿಗೆ ಅರ್ಜಿ
author img

By ETV Bharat Karnataka Team

Published : Dec 16, 2023, 7:15 PM IST

ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ವೃದ್ಧರಿಂದ ಜಿಲ್ಲಾಧಿಕಾರಿಗೆ ಅರ್ಜಿ

ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ವೃದ್ಧರೊಬ್ಬರು ತಮ್ಮ ಮಗನಿಗೆ ಹೆಣ್ಣು ಕೊಡಿಸಬೇಕು, ಜೊತೆಗೆ ತಮ್ಮ ಮಗಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಅರ್ಜಿ ಸಲ್ಲಿಸಿದ ಪ್ರಸಂಗ ನಡೆಯಿತು. ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರಾಮಣ್ಣ ಎಂಬವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಅವರ ಬಳಿ ತಮ್ಮ ಅಹವಾಲನ್ನು ತೋಡಿಕೊಂಡರು. ಈ ವೇಳೆ ಜಿಲ್ಲಾಧಿಕಾರಿ, ರಾಮಣ್ಣ ಅವರಿಂದ ಅರ್ಜಿ ಸ್ವೀಕರಿಸಿ ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ, ನನ್ನ ಮಕ್ಕಳಿಗೆ ಹೆಣ್ಣು ಕೊಡುವವರು ಇಲ್ಲ. ನನ್ನ ಮಗ ಅನಕ್ಷರಸ್ಥನಾಗಿದ್ದಾನೆ. ಹೀಗಾಗಿ ಯಾರೂ ಹೆಣ್ಣು ಕೊಡುತ್ತಿಲ್ಲ. ಓದಿದವರಿಗೆ ಮಾತ್ರ ಹೆಣ್ಣು ಕೊಡುತ್ತಿದ್ದಾರೆ. ನನಗೆ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಿದೆ. ಅಲ್ಲದೇ ನನ್ನ ಮನೆತನ ಬೆಳೆಯಬೇಕಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಅವರಿಗೆ ನನ್ನ ಸಮಸ್ಯೆ ಬಗೆಹರಿಸುವಂತೆ ಅರ್ಜಿಯನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶುಭ ಕಲ್ಯಾಣ್ ಅವರು ಇಂದು ಶಿರಾ ತಾಲೂಕಿನ ಜನತಾದರ್ಶನದಲ್ಲಿ ಭಾಗಿಯಾಗಿದರು. ಈ ಸಂದರ್ಭದಲ್ಲಿ ನೂರಾರು ಜನರ ಅಹವಾಲುಗಳನ್ನು ಆಲಿಸಿದರು. ಈ ವೇಳೆ, ಕರ್ನಾಟಕ ಸರ್ಕಾರದ ವಿಶೇಷ ನವದೆಹಲಿ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರು ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ತಹಶೀಲ್ದಾರ್​ ದತ್ತಾತ್ರೇಯ ಸೇರಿದಂತೆ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು. ಜನತಾದರ್ಶನದ ವೇದಿಕೆ ಕಾರ್ಯಕ್ರಮದಲ್ಲಿ ಈ ಭಾಗದ ವಿಧಾನ ಪರಿಷತ್ ಸದಸ್ಯರ ಭಾವಚಿತ್ರವನ್ನು ಹಾಕಲಾಗಿಲ್ಲ. ಶಿಷ್ಟಾಚಾರ ಪಾಲನೆ ಮಾಡಿರುವುದಿಲ್ಲ ಎಂದು ಚಿದಾನಂದ್ ಆರೋಪ ಮಾಡಿದರು.

ಸಿಎಂ ಜನತಾ ದರ್ಶನ : ಕಳೆದ ನವೆಂಬರ್​ ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಅಹವಾಲುಗಳನ್ನು ಆಲಿಸಿದ್ದರು. ಈ ವೇಳೆ ಒಟ್ಟು 3812 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 2862 ಅರ್ಜಿಗಳನ್ನು ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿತ್ತು. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು.

ಇದನ್ನೂ ಓದಿ : ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೂರ್ವಭಾವಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.