ETV Bharat / state

ಎಲ್ಐಸಿ ಖಾಸಗೀಕರಣ ಗೊಂದಲ: ಡಿವಿಜನಲ್ ಮ್ಯಾನೇಜರ್ ಆಶಿಶ್ ಕುಮಾರ್ ಸ್ಪಷ್ಟನೆ ಏನು? - ತುಮಕೂರು ಸುದ್ದಿಗೋಷ್ಠಿ

ಭಾರತೀಯ ಜೀವ ವಿಮಾ ನಿಗಮ ಖಾಸಗೀಕರಣಗೊಳಿಸುತ್ತಾರೆ ಎಂಬ ಸುಳ್ಳು ವದಂತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದ್ದು, ಇದು ತಪ್ಪು ಮಾಹಿತಿ ಎಂದು ಬೆಂಗಳೂರು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜಿನಲ್ ಮ್ಯಾನೇಜರ್ ಆಶಿಶ್ ಕುಮಾರ್ ತಿಳಿಸಿದರು.

press meet
ಡಿವಿಜನಲ್ ಮ್ಯಾನೇಜರ್ ಆಶಿಶ್ ಕುಮಾರ್
author img

By

Published : Feb 26, 2020, 9:17 PM IST

ತುಮಕೂರು: ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುತ್ತಾರೆ ಎಂಬ ಸುಳ್ಳು ವದಂತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದ್ದು, ಇದು ತಪ್ಪು ಮಾಹಿತಿ ಎಂದು ಬೆಂಗಳೂರು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಆಶಿಶ್ ಕುಮಾರ್ ತಿಳಿಸಿದರು.

ಎಲ್ಐಸಿಯ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಆಶಿಶ್ ಕುಮಾರ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಐಸಿಯ ಶೇ100ರಷ್ಟು ಷೇರ್​ನಲ್ಲಿ ಶೇಕಡಾ 10ರಷ್ಟು ಷೇರುಗಳನ್ನು ಆಸಕ್ತರಿಗೆ ಮಾರಾಟ ಮಾಡಲಾಗುತ್ತದೆ ಎಂದು ಹೇಳಿದ್ದಾರೆಯೇ ಹೊರತು ಖಾಸಗೀಕರಣದ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ವರ್ಷ ಭಾರತೀಯ ಜೀವ ವಿಮಾ ನಿಗಮ 53 ಸಾವಿರ ಕೋಟಿ ರೂ ಲಾಭ ಗಳಿಸಿದ್ದು, ಅದರಲ್ಲಿ ಶೇ 95ರಷ್ಟು ಲಾಭಾಂಶವನ್ನ ನಿಗಮದ ಪಾಲಿಸಿದಾರರಿಗೆ ವಿತರಿಸಲಾಗಿದೆ ಎಂದರು.

ಇನ್ನು ನಿಗಮವು ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಶೇ 5ರಷ್ಟು ಅಂದರೆ 2,600 ಕೋಟಿ ರೂ ಲಾಭದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಚೆಕ್ ಮೂಲಕ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.