ತುಮಕೂರು: ಇತ್ತೀಚೆಗೆ ಬೆಂಗಳೂರಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿಗಳು ಇದ್ದರು. ಅದಕ್ಕೆ ಪಠ್ಯ ಪುಸ್ತಕವನ್ನು ಹರಿದು ಹಾಕಿದೆ. ಇಲ್ಲದಿದ್ದರೆ ಸುಟ್ಟು ಹಾಕುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಹರಿದು ಹಾಕಿರುವುದು ಹೊಸ ಸಂಸ್ಕೃತಿಯಲ್ಲ. ಸಂವಿಧಾನ ಶಿಲ್ಪಿ ಅಂಬೇಡ್ಕರ್, ಬಸವಣ್ಣನವರಿಗೆ ಮಾಡಿದ ಅಪಮಾನವನ್ನು ಸಹಿಸಿಕೊಂಡು ಇರೋದಿಕ್ಕೆ ಆಗಲ್ಲ ಎಂದರು.
ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಮಾಡಲಾಗುತ್ತಿದೆ. ಸಭೆಯಲ್ಲಿ ಜಿಲ್ಲೆಯ ಸಾಮಾಜಿಕ, ರಾಜಕೀಯ, ರೈತ, ನಿರುದ್ಯೋಗ, ಶೋಷಣೆ ಬಗ್ಗೆ ಚರ್ಚೆ ನಡೆಯುತ್ತದೆ ಎಂದರು. ನಾಯಕರಷ್ಟೇ ಅಲ್ಲ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಉದಯ್ ಪುರದ ಮಾದರಿಯಲ್ಲಿ ಸಭೆ ನಡೆಯುತ್ತಿದೆ ಎಂದರು.
ಇಡಿ ವಿಚಾರಣೆ ಕುರಿತು ಪ್ರತಿಕ್ರಿಯಿಸಿ, ಇಡಿ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ನಾನು ಇನ್ನೂ ಚಾರ್ಜ್ ಶೀಟ್ ನೋಡಿಲ್ಲ. ಮೂರು-ನಾಲ್ಕು ವರ್ಷದ ಹಿಂದೆಯೇ ಚಾರ್ಜ್ ಶೀಟ್ ಸಲ್ಲಿಸಬೇಕಾಗಿತ್ತು. ನಾನು ಜೈಲಿನಲ್ಲಿದ್ದಾಗಲೇ ಚಾರ್ಜ್ ಶೀಟ್ ಹಾಕಬೇಕಿತ್ತು. ಬಹಳ ಲೇಟಾಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಾಜಕಾರಣ ಮಾಡ್ತಾರೆ ಎಂದು ಡಿಕೆಶಿ ಆರೋಪಿಸಿದರು.
ಇದನ್ನೂ ಓದಿ: ಬಿಜೆಪಿ ಯಾರನ್ನೂ ಮುಗಿಸಲು ಹೊರಟಿಲ್ಲ: ಸಚಿವ ಅಶ್ವತ್ಥನಾರಾಯಣ