ತುಮಕೂರು:ಸ್ಥಳೀಯ ಸಂಸ್ಥೆ ಚುನಾವಣೆಗಳ ತಯಾರಿ ಮತ್ತು ಪಕ್ಷದ ಸಂಘಟನೆ ದೃಷ್ಟಿಯಿಂದ ವಿಭಾಗೀಯ ಮಟ್ಟದ ಸಭೆಯನ್ನು ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿಯೂ ಇರುವಂತಹ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿದೆ. ನೆರೆಹಾವಳಿ ಪರಿಸ್ಥಿತಿಯನ್ನು ಅವಲೋಕಿಸಿ ಬಗೆಹರಿಸುವ ನಿಟ್ಟಿನಲ್ಲಿ ಆರ್ ವಿ ದೇಶಪಾಂಡೆ ಹಾಗೂ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಎರಡು ಸಮಿತಿಗಳನ್ನು ರಚಿಸಿದ್ದೇನೆ ಎಂದರು.
ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ಆ ಬಗ್ಗೆ ಪರಿಶೀಲಿಸಿ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇವೆ. ನಂತರ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯಿಸಲಿದೆ ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ:
ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ಆರಂಭವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ.
ಇನ್ನು ಐದು ಪ್ರಮುಖ ಜಿಲ್ಲೆಗಳ ಮುಖಂಡರು ಆಗಮಿಸಿದ್ದಾರೆ.ಇದು ಐದು ಜಿಲ್ಲೆಗಳ ಪಕ್ಷ ಸಂಘಟನೆ ವಿಚಾರವಾಗಿ ನಡೆಯುತ್ತಿರುವ ಸಭೆಯಾಗಿದೆ.ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಮುಖಂಡರು ಭಾಗವಹಿಸಿದ್ದಾರೆ. ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.
ಇದನ್ನೂ ಓದಿ:ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಇನ್ನೊಬ್ಬ ಭ್ರಷ್ಟ ಸಿಎಂ ಬರಲಿದ್ದಾರೆ: ಸಿದ್ದರಾಮಯ್ಯ