ETV Bharat / state

ಖಾಸಗಿ ಆಸ್ಪತ್ರೆ ವೈದ್ಯನಿಗೆ ಹಿಗ್ಗಾಮುಗ್ಗ ಥಳಿತ... ವಿಡಿಯೋ ವೈರಲ್! - ಮಂಜುನಾಥ ಮಕ್ಕಳ ಆಸ್ಪತ್ರೆ ವೈದ್ಯ ಮಂಜುನಾಥ್

ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಸಂಬಂಧಿಕರು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಖಾಸಗಿ ಆಸ್ಪತ್ರೆ ವೈದ್ಯನಿಗೆ ಥಳಿತ
author img

By

Published : Sep 26, 2019, 9:24 PM IST

ತುಮಕೂರು: ಜಿಲ್ಲೆಯ ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಸಂಬಂಧಿಕರು ವೈದ್ಯನಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಖಾಸಗಿ ಆಸ್ಪತ್ರೆ ವೈದ್ಯನಿಗೆ ಥಳಿತ

ಮಂಜುನಾಥ ಮಕ್ಕಳ ಆಸ್ಪತ್ರೆ ವೈದ್ಯ ಮಂಜುನಾಥ ಅವರಿಗೆ ಥಳಿಸುತ್ತಿರುವ ದೃಶ್ಯವನ್ನು ಶಿಶುವಿನ ಪೋಷಕರೇ ಘಟನೆ ನಡೆದು ಎರಡು ದಿನಗಳ ನಂತರ ವೈರಲ್ ಮಾಡಿದ್ದಾರೆ. ಕುಣಿಗಲ್ ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ಸಾದೀಕ್ ಪಾಷ ಎಂಬುವವರು ಶೀತ ಜ್ವರದಿಂದ ಬಳಲುತ್ತಿದ್ದ ತಮ್ಮ ಎರಡು ತಿಂಗಳ ಗಂಡು ಮಗುವನ್ನು ತಾಲೂಕು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಎರಡು ದಿನಗಳ ಕಾಲ ವೈದ್ಯ ಮಂಜುನಾಥ ಚಿಕಿತ್ಸೆ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯ ಮಂಜುನಾಥ ಪೋಷಕರಿಗೆ ಸಲಹೆ ನೀಡಿದ್ದಾರೆ.
ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಕೊರತೆಯಿಂದಾಗಿ ಮಗುವನ್ನು ತುಮಕೂರಿನ ಸಿದ್ದಗಂಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಇದರಿಂದ ರೊಚ್ಚಿಗೆದ್ದ ಪೋಷಕರು ಕುಣಿಗಲ್​ಗೆ ಬಂದು ವೈದ್ಯ ಮಂಜುನಾಥ್​ಗೆ ಥಳಿಸಿದ್ದಾರೆ.

ವೈದ್ಯ ಮಂಜುನಾಥ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕುಣಿಗಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ವೈದ್ಯರ ಮೇಲೆ ಹಲ್ಲೆ ನಡೆಸಿದಂತಹ ವಿಡಿಯೋವನ್ನು ವೈರಲ್ ಮಾಡಿ ಮಾನ ಹರಾಜು ಹಾಕಿರುವಂತಹ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Intro:nullBody:ಖಾಸಗಿ ಆಸ್ಪತ್ರೆ ವೈದ್ಯನಿಗೆ ಥಳಿತ.... ವಿಡಿಯೋ ವೈರಲ್
ತುಮಕೂರು
ಜಿಲ್ಲೆಯ ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಸಂಬಂಧಿಕರು ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಜುನಾಥ ಮಕ್ಕಳ ಆಸ್ಪತ್ರೆ ವೈದ್ಯ ಮಂಜುನಾಥ್ ಅವರಿಗೆ ಥಳಿಸುತ್ತಿರುವ ದೃಶ್ಯವನ್ನು ಶಿಶುವಿನ ಪೋಷಕರೇ ಘಟನೆ ನಡೆದು ಎರಡು ದಿನಗಳ ನಂತರ ವೈರಲ್ ಮಾಡಿದ್ದಾರೆ.
ಕುಣಿಗಲ್ ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ಸಾದೀಕ್ ಪಾಷ ಎಂಬುವರ ಶೀತ ಜ್ವರದಿಂದ ಬಳಲುತ್ತಿದ್ದ ತಮ್ಮ 2 ತಿಂಗಳ ಗಂಡು ಮಗುವನ್ನು ತಾಲೂಕು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಎರಡು ದಿನಗಳ ಕಾಲ ವೈದ್ಯ ಮಂಜುನಾಥ್ ಚಿಕಿತ್ಸೆ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯ ಮಂಜುನಾಥ್ ಪೋಷಕರಿಗೆ ಸಲಹೆ ನೀಡಿದ್ದಾರೆ.
ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಕೊರತೆಯಿಂದಾಗಿ ಮಗುವನ್ನು ತುಮಕೂರಿನ ಸಿದ್ದಗಂಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲಿ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಇದರಿಂದ ರೊಚ್ಚಿಗೆದ್ದ ಪೋಷಕರು ಕುಣಿಗಲ್ ಗೆ ಬಂದು ವೈದ್ಯ ಮಂಜುನಾಥ್ ಥಳಿಸಿದ್ದಾರೆ.

ವೈದ್ಯ ಮಂಜುನಾಥ್ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕುಣಿಗಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ವೈದ್ಯರ ಮೇಲೆ ಹಲ್ಲೆ ನಡೆಸಿ ದಂತಹ ವಿಡಿಯೋವನ್ನು ವೈರಲ್ ಮಾಡಿ ಮಾನಹರಾಜು ಹಾಕಿರುವಂತಹ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.